Breaking News

ಹುಲಿ ದಾಳಿಗೆ ರೈತ ಬಾಲಾಜಿ ನಾಯ್ಕ ಸ್ಥಳದಲ್ಲೇ ಸಾವು….

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಚಿರತೆ ಹಾವಳಿ ಕಡಿಮೆ ಆಗಿದ್ದು, ಹುಲಿ ದಾಳಿ ಮತ್ತೆ ಮುನ್ನಲೆಗೆ ಬಂದಿದೆ. ಸರಗೂರು ತಾಲೂಕಿನ ಬಿ.ಮಟಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಬೇಗೂರು ಗ್ರಾಮದ ನಿವಾಸಿಯೊಬ್ಬರನ್ನು ಹುಲಿ‌ಕೊಂದು ಹಾಕಿದೆ. ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಬಾಲಾಜಿ ನಾಯ್ಕ(೪೨) ಮೇಲೆ ಹುಲಿ ದಾಳಿಯಿಂದ ಮೃತಪಟ್ಟಿದ್ದಾರೆ.

ಬಾಲಾಜಿ ನಾಯ್ಕ ಜಮೀನಿನಲ್ಲಿ ದನ ಕಾಯುತ್ತಿದ್ದರು. ಈ ವೇಳೆ ಹುಲಿ ಏಕಾಏಕಿ ದಾಳಿ ಮಾಡಿದೆ. ಹುಲಿ ದಾಳಿಗೆ ರೈತ ಬಾಲಾಜಿ ನಾಯ್ಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ದೇಹವನ್ನು ಹುಲಿ ಕಾಡಿನೊಳಗೆ ಎಳೆದುಕೊಂಡು ಹೋಗಿದೆ. ಈ ವೇಳೆ ದನಗಳು ಚದುರಿ ಓಡಿದ್ದು, ಹುಲಿ ದಾಳಿ ಮಾಡಿದ ದೃಶ್ಯವನ್ನು ಪಕ್ಕದ ಜಮೀನಿನಲ್ಲಿ ದನಕಾಯುವ ವ್ಯಕ್ತಿ ಕಂಡು ವಿಷಯವನ್ನು ಗ್ರಾಮಸ್ಥರಿಗೆ ಮುಟ್ಟಿಸಿದ್ದಾರೆ.
ನಂತರ ಗ್ರಾಮಸ್ಥರು ಬಂದು ನೋಡಿದಾಗ ಬಾಲಾಜಿ ನಾಯ್ಕ ಅವರ ಎಡ ಕಾಲು, ದೇಹದ ಕೆಲ ಭಾಗಗಳು, ತಲೆಯನ್ನು ಹುಲಿ ಕಿತ್ತು ತಿಂದಿದೆ ಎನ್ನಲಾಗಿದೆ. ಮೃತ ಬಾಲಾಜಿ ನಾಯ್ಕಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ. ಮನೆಯ ಆಧಾರ ಸ್ತಂಭವನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *