ಜನಸಂಖ್ಯೆ ನಿಯಂತ್ರಣದಲ್ಲಿ ಮಹಿಳಾ ಶಿಕ್ಷಣದ ಪಾತ್ರದ ಕುರಿತು ಮಂಗಳವಾರ ಮಧ್ಯಾಹ್ನ ವಿಧಾನಸಭೆಯಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕ್ಷಮೆಯಾಚಿಸಿದ್ದಾರೆ. ನಾನು ಕ್ಷಮೆಯಾಚಿಸುತ್ತೇನೆ ಮತ್ತು ನನ್ನ ಮಾತುಗಳನ್ನು ಹಿಂತೆಗೆದುಕೊಳ್ಳುತ್ತೇನೆ. ನನ್ನ ಮಾತುಗಳು ತಪ್ಪಾಗಿದ್ದರೆ, ನಾನು ಕ್ಷಮೆಯಾಚಿಸುತ್ತೇನೆ, ಯಾರಿಗಾದರೂ ನೋಯಾಗಿದ್ದರೆ, ನಾನು ಅವನ್ನು ಹಿಂದಕ್ಕೆ ತೆಗೆದುಕೊಳ್ಳುತ್ತೇನೆ” ಎಂದು ಅವರು ಹೇಳಿದರು. ಬಿಹಾರದ ವಿಧಾನಸಭೆಯಲ್ಲಿ ಮಾತನಾಡುವ ಸಂದರ್ಭದಲ್ಲಿ, ರಾಜ್ಯದಲ್ಲಿ ಸಂತಾನೋತ್ಪತ್ತಿ ಪ್ರಮಾಣ ಶೇ 4.2 ರಿಂದ 2.9ಕ್ಕೆ ಕುಸಿದಿದೆ ಎಂದು ಮಾಹಿತಿ ನೀಡುವ ಸಂದರ್ಭದಲ್ಲಿ ಜನಸಂಖ್ಯಾ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳಲು ಹೆಣ್ಣುಮಕ್ಕಳಿಗೆ ಶಿಕ್ಷಣದ ಅಗತ್ಯವಿದೆ ಎಂದಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





