Breaking News

ಲ್ಹಾದ್‌ ಜೋಶಿಯವರು ಸಲ್ಲಿಸಿರುವ ಈ ಮನವಿಯಲ್ಲಿ ಪ್ರಸ್ತಾಪಿಸಿದ ಎಲ್ಲಾ ಯೋಜನೆಗಳು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಬರಲಿವೆ…

ಹುಬ್ಬಳ್ಳಿ: ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಸೇರಿದಂತೆ ಅಂದಾಜು 484 ಕೋಟಿ ವೆಚ್ಚದ 167 ಯೋಜನೆಗಳನ್ನು ಕರ್ನಾಟಕದಲ್ಲಿ ಜಾರಿಗೆ ತರುವ ಕುರಿತು ಕೇಂದ್ರ ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿಯವರು ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿಯವರು ಸಲ್ಲಿಸಿರುವ ಈ ಮನವಿಯಲ್ಲಿ ಪ್ರಸ್ತಾಪಿಸಿದ ಎಲ್ಲಾ ಯೋಜನೆಗಳು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಬರಲಿವೆ. ಈ ಯೋಜನೆಯ ಉದ್ದೇಶ ಕೃಷಿ ಭೂಮಿಯ ಮಟ್ಟದಲ್ಲಿ ನೀರಾವರಿಗಾಗಿ ತಗಲುವ ವೆಚ್ಚವನ್ನು ಸರಳೀಕರಿಸುವುದು ಕನಿಷ್ಠಗೊಳಿಸುವುದಾಗಿದೆ. ಅಷ್ಟೇ ಅಲ್ಲ, ಹೆಚ್ಚಿನ ಕೃಷಿ ಭೂಮಿಯನ್ನು ನೀರಾವರಿ ವಿಧಾನಗಳಿಗೆ ಒಳಪಡುವಂತೆ ಮಾಡಲಾಗುತ್ತಿದೆ.
ನೀರಾವರಿ ಜಮೀನಿನಲ್ಲಿ ಬಳಸುವ ನೀರು ಸಮರ್ಥವಾಗಿ ಜಮೀನಿಗೆ ಮಾತ್ರ ಬಳೆಕೆಯಾಗಬೇಕು. ಈ ನಿಟ್ಟಿನಲ್ಲಿ ನೀರಾವರಿ ಮಾದರಿಯ ದಕ್ಷತೆಯ ಬಗ್ಗೆ ಕಾಳಜಿ ವಹಿಸುವಂತಹ ಯೋಜನೆಗಳು ಎಂಬುದು ಈ ಯೋಜನೆಗಳ ವಿಶೇಷ. ಇವುಗಳನ್ನು ಜಾರಿ ಮಾಡುವ ಮೂಲಕ ಕರ್ನಾಟಕದ ರೈತರಿಗೆ ಅನುಕೂಲ ಮಾಡಿಕೊಡುವುದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಉದ್ದೇಶವಾಗಿದೆ.

Share News

About BigTv News

Check Also

ಕಾನೂನು ರಕ್ಷಕನೇ ಭಕ್ಷಕ..! ಪೋಕ್ಸೊ ಪ್ರಕರಣದಲ್ಲಿ ಪಿಎಸ್‌ಐ ಬಂಧನ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಬಂಧನ, ಭಟ್ಕಳ: ಸಾರ್ವಜನಿಕರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಅಧಿಕಾರಿಯೊಬ್ಬನೇ …

Leave a Reply

Your email address will not be published. Required fields are marked *