ಕನ್ನಡ ಕಿರುತೆರೆ ನಟಿಯರು ಹೆಚ್ಚಾಗಿ ಪರಭಾಷೆಗಳಲ್ಲಿ ಮಿಂಚುವುದು ಸಹಜ. ಈ ಸಾಲಿಗೆ ಕಿರುತೆರೆ ನಟಿ ರಶ್ಮಿ ಪ್ರಭಾಕರ್ ಹೊರತಾಗೇನೂ ಇಲ್ಲ.ತಮಿಳಿನ ಧಾರಾವಾಹಿಗಳಲ್ಲಿ ನಟಿಸುತ್ತಲೇ, ಕನ್ನಡ ಕಿರುತೆರೆಯಲ್ಲೂ ಆಗಾಗ ಕಾಣಿಸಿಕೊಳ್ಳುವ ಸೂಪರ್ ಕ್ವೀನ್ ಕಾರ್ಯಕ್ರಮದಲ್ಲಿ ಕಿರೀಟವನ್ನು ಮುಡಿಗೇರಿಸಿಕೊಂಡು ಸಂಭ್ರಮಿಸಿದ್ದರು. ಈಗ ಜೀ ಕನ್ನಡ ವಾಹಿನಿಯ ಜೀ ಕುಟುಂಬ ಕಾರ್ಯಕ್ರಮದಲ್ಲಿ ಕೆಂಪು ಗೌನ್ ಧರಿಸಿ ಮಿಂಚಲು ಸಜ್ಜಾಗಿದ್ದಾರೆ. ಈಗಾಗಲೇ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





