ಮಂಡ್ಯ: 2019 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿದ್ದ ಸಮಲತಾ ಹಾಗೂ ನಿಖಿಲ್ ಕುಮಾರಸ್ವಾಮಿ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟು, ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಗೆಲುವು ಸಾಧಿಸಿದ್ರು. ಆದರೆ, ನಾನು ಮಂಡ್ಯ ಕ್ಷೇತ್ರವನ್ನ ಬಿಟ್ಟು ಕೊಡಲ್ಲ, ಮುಂದೆ ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದ ಸುಮಲತಾ ಇದೀಗ ಇಕ್ಕಟ್ಟಿಗೆ ಸಿಲುಕಿದ್ದಾರೆ.
ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಸರ್ಕಾರ ರಚಿಸಿರುವ ಕಾಂಗ್ರೆಸ್ ಇದೀಗ, ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲಲು ಭರ್ಜರಿ ತಯಾರಿ ನಡೆಸಿದ್ದಾರೆ. ಇತ್ತ ಕಾಂಗ್ರೆಸ್ ಗೆ 2024 ರಲ್ಲಿ ನಡೆಯಲಿರು ಲೋಕಸಭಾ ಚುನಾವಣೆಯಲ್ಲಿ ಠಕ್ಕರ್ ಕೊಡಲು ಬಿಜೆಪಿ- ಜೆಡಿಎಸ್ ಮೈತ್ರಿಯಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧಿಸಲಿದ್ದಾರೆ ಎಂಬುದು ಖಚಿತವಾಗಿದ್ದು, ಹಾಲಿ ಮಂಡ್ಯ ಸಂಸದೆಯಾಗಿರುವ ಸುಮಲತಾ ಅವರ ಭವಿಷ್ಯವೇನು ಎಂಬ ಪ್ರಶ್ನೆ ಉದ್ಭವಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





