Breaking News

ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಶಾಸಕರಾದ ಬಿವೈ ವಿಜಯೇಂದ್ರ ಆಯ್ಕೆ…

ಬೆಂಗಳೂರು: ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕರಾದ ಬಿವೈ ವಿಜಯೇಂದ್ರ ಅವರನ್ನು ಶುಕ್ರವಾರ ಬಿಜೆಪಿ ಹೈಕಮಾಂಡ್‌ ಆಯ್ಕೆ ಮಾಡಿದ್ದು, ರಾಜ್ಯಾಧ್ಯಕ್ಷರಾದ ಬಳಿಕ ದೊಡ್ಡ ದೊಡ್ಡ ನಾಯಕರ ಮನೆಗೆ ತೆರಳುವ ಬದಲು ಕಾರ್ಯಕರ್ತರ ಮನೆಗೆ ಬಿ ವೈ ವಿಜಯೇಂದ್ರ ತೆಳಿದ್ದು, ಕುತೂಹಲಕಾರಿ ಹೆಜ್ಜೆ ಇಟ್ಟಿದ್ದಾರೆ.
ಗಾಂಧಿನಗರ ಬೂತ್ 40ರ ಅಧ್ಯಕ್ಷ ಶಶೀಂದ್ರ ಅವರ ಮನೆಗೆ ಭೇಟಿ ಕೊಟ್ಟ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು, ಬಿಜೆಪಿ ಕಾರ್ಯಕರ್ತರು ಹೋರಾಟದಿಂದ ಹಿಂದೆ ಸರಿದ ಉದಾಹರಣೆಗಳಿಲ್ಲ. ನಮ್ಮ ಕಾರ್ಯಕರ್ತರ ರಕ್ತದ ಕಣಕಣದಲ್ಲೂ ಹೋರಾಟದ ಗುಣವಿದೆ. ಕಾಂಗ್ರೆಸ್ ಅಬ್ಬರವನ್ನು ಮೀರಿ ನಮ್ಮ ಪಕ್ಷದ ಕಾರ್ಯಕರ್ತರು ಸಂಘಟನೆ ಮಾಡುತ್ತಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *