Breaking News

ವಿರೋಧ ಪಕ್ಷದ ನಾಯಕನ ಯಾವಾಗ ಎನ್ನುವ ಪ್ರಶ್ನೆ ಉದ್ಭವಿಸಿದೆ…..

ಬೆಂಗಳೂರು: ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಶಾಸಕರಾದ ಬಿ ವೈ ವಿಜಯೇಂದ್ರ ಅವರನ್ನು ಶುಕ್ರವಾರ ಬಿಜೆಪಿ ಹೈಕಮಾಂಡ್‌ ಆಯ್ಕೆ ಮಾಡಿದ್ದು, ರಾಜ್ಯ ಬಿಜೆಪಿಗೆ ಹೊಸ ಸಾರಥಿ ಸಿಕ್ಕಂತಾಗಿದೆ. ಇದೀಗ ವಿರೋಧ ಪಕ್ಷದ ನಾಯಕನ ಯಾವಾಗ ಎನ್ನುವ ಪ್ರಶ್ನೆ ಉದ್ಭವಿಸಿದೆ. ಲೋಕಸಭಾ ಚುನಾವಣೆ ಹಾಗೂ ಡಿಸೆಂಬರ್‌ 4 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಹೀಗಾಗಿ ಬಿಜೆಪಿ ಹೈಕಮಾಂಡ್‌ ವಿರೋಧ ಪಕ್ಷದ ಆಯ್ಕೆಗೆ ಇದೀಗ ಮುಂದಾಗಿದೆ. ಬಿಜೆಪಿ ಯಾವುದೇ ಹುದ್ದೆಗಳಿಗೆ ನೇಮಕ ಮಾಡುವ ಮೊದಲು ಜಾತಿ ಸಮೀಕರಣವನ್ನು ಮನಸ್ಸಿನಲ್ಲಿಟ್ಟುಕೊಳ್ಳುತ್ತದೆ. ಅದರಂತೆ ಈಗಾಗಲೇ ಲಿಂಗಾಯತ ಸಮುದಾಯವನ್ನ ಪರಿಗಣಿಸಿ ಲಿಂಗಾಯತ ಹಿರಿಯ ನಾಯಕ ಬಿ ಎಸ್‌ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯನ್ನ ನೀಡಲಾಗಿದೆ.

ಇನ್ನೂ ವಿರೋಧ ಪಕ್ಷ ನಾಯಕ ಆಯ್ಕೆ ಹೈಕಮಾಂಡ್‌ ಗೆ ಕಗ್ಗಟ್ಟಾಗಿದ್ದು, ಈ ಹುದ್ದೆಗೆ ಒಕ್ಕಲಿಗರು ಮತ್ತು ಒಬಿಸಿ ನಾಯಕರಿಗೆ ಪ್ರಾತಿನಿಧ್ಯವನ್ನು ನೀಡುವ ನಿರೀಕ್ಷೆಯಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದ ನಂತರ ಬಿಜೆಪಿ ಹೈಕಮಾಂಡ್ ನವೆಂಬರ್ 17 ರಂದು ವಿಧಾನಸಭೆ ಪ್ರತಿಪಕ್ಷ ನಾಯಕರ ಹೆಸರನ್ನು ಘೋಷಿಸಲು ನಿರ್ಧರಿಸಿದೆ.

Share News

About BigTv News

Check Also

ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!

ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ …

Leave a Reply

Your email address will not be published. Required fields are marked *