ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಕೈ ಕೊಟ್ಟ ಪರಿಣಾಮ ಬರಪರಿಸ್ಥಿತಿ ಆವರಿಸಿದೆ. ಸರ್ಕಾರ ವಿವಿಧ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದೆ. ಬರದಿಂದಾಗಿ ಬೆಳೆನಷ್ಟವಾದ ರೈತರು ಪರಿಹಾರವನ್ನು ಪಡೆಯಲು ಎಫ್‌ಐಡಿ ಹೊಂದಿರುವುದು ಸೂಕ್ತ.ಬರ ಘೋಷಣೆಗೊಂಡ ತಾಲೂಕುಗಳಲ್ಲಿ ಬೆಳೆ ನಷ್ಟವಾಗಿರುವ ರೈತರು ಪರಿಹಾರ ಧನ ಪಡೆಯಲು ಭೂಮಿ ವಿವರ ಇರುವ ಎಫ್‌ಐಡಿ Fruits ID (FID)

ಹೊಂದಿರುವುದು ಸೂಕ್ತ. ಆ ಎಫ್‍ಐಡಿ ಗುರುತಿನ ಸಂಖ್ಯೆಯೊಂದಿಗೆ ರೈತನು ತಮ್ಮ ಹಕ್ಕಿನಲ್ಲಿರುವ ಎಲ್ಲಾ ಸಾಗುವಳಿ ಭೂಮಿಗಳ ವಿವರಗಳನ್ನು ಸೇರಿಸಿರಬೇಕು.ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳು ಮತ್ತು ಕೃಷಿಗೆ ಪೂರಕವಾದ ಇಲಾಖೆಗಳ ಮುಖ್ಯಸ್ಥರ ಮಾರ್ಗದರ್ಶನದಲ್ಲಿ ಅಧೀನ ಕಚೇರಿಗಳಲ್ಲಿ ರೈತರ ಫ್ರೂಟ್ಸ್ ಐಡಿ ಸೃಷ್ಟಿಸಲು ಕ್ರಮವನ್ನು ಕೈಗೊಳ್ಳಲಾಗಿದೆ. ರೈತರು ಇದರ ಸದುಪಯೋಗ ಪಡೆಯಬೇಕೆಂದು ಕರೆ ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

