Breaking News

ಮಹಿಳೆ ಮೇಲೆ ನಾಯಿ ದಾಳಿ ನಟ ದರ್ಶನ್ ಗೆ ನೋಟಿಸ್….

ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇತ್ತೀಚೆಗೆ ಅವರ ಮನೆಯ ಸಾಕು ನಾಯಿ ವಕೀಲೆಯೊಬ್ಬರಿಗೆ ಕಚ್ಚಿತ್ತು. ಈ ಪ್ರಕರಣದ ಸಂಬಂಧ ಆ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿನಗರ ಪೊಲೀಸರು ದರ್ಶನ್‌ಗೆ ನೋಟಿಸ್ಕ

ಳುಹಿಸಿದ್ದಾರೆ.ದರ್ಶನ್‌ಗೆ ರಾಜರಾಜೇಶ್ವರಿ ನಗರ ಪೊಲೀಸರು ಮೂರು ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ತಿಳಿದ್ದಾರೆ. ಬಿಇಎಂಎಲ್ 5ನೇ ಹಂತ ನಿವಾಸಿಯಾಗಿದ್ದ ಅಮಿತಾ ಜಿಂದಾಲ್ ಎಂಬುವವರು ಕಾರ್ಯಕ್ರಮದ ನಿಮಿತ್ತ ರಾಜರಾಜೇಶ್ವರಿ ನಗರಕ್ಕೆ ಬಂದಿದ್ದರು. ದರ್ಶನ್ ಮನೆಯ ಮುಂಭಾಗದಲ್ಲಿ ಕಾರನ್ನು ಪಾರ್ಕ್ ಮಾಡಿ ಕಾರ್ಯಕ್ರಮಕ್ಕೆ ತೆರಳಿದ್ದರು. ಹಿಂತಿರುಗಿ ಬಂದಾಗ ಈ ಘಟನೆ ನಡೆದಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *