ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮ ಆರಂಭವಾಗಿದೆ. ಜನರು ಹಬ್ಬವನ್ನು ಆಚರಣೆ ಮಾಡಲು ಪಟಾಕಿ ಸಿಡಿಸುತ್ತಿದ್ದಾರೆ. ಪಟಾಕಿ ಮಾರಾಟ ಮತ್ತು ದಾಸ್ತಾನು ಕುರಿತು ಜನರಲ್ಲಿ ಜಾಗೃತಿಯನ್ನೂ ಮೂಡಿಸಲಾಗುತ್ತಿದೆ. ಹಸಿರು ಪಟಾಕಿ ಸಿಡಿಸಿ, ಪರಿಸರ ರಕ್ಷಣೆ ಸಹಕರಿಸಿ ಎಂದು ಮನವಿ ಮಾಡಲಾಗಿದೆ.ಜನರು ಸುಪ್ರೀಂಕೋರ್ಟ್ ಆದೇಶದಂತೆ ಹಸಿರು ಪಟಾಕಿಗಳನ್ನು ಹೊರತು ಪಡಿಸಿ ಉಳಿದ ಪಟಾಕಿಗಳನ್ನು ಬಳಕೆ ಮಾಡಬಾರದು. ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದ್ದು, ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಎಂದು ಕರೆ ಕೊಡಲಾಗಿದೆ.ಪಟಾಕಿ ಸಿಡಿಸುವಾಗ ಪಟಾಕಿ ಬಳಸುವಾಗ ಪ್ರಾಣಿ-ಪಕ್ಷಿಗಳು, ಮಕ್ಕಳು ಮತ್ತು ವೃದ್ದರಿಗೆ ತೊಂದರೆಯಾಗದಂತೆ ಬಳಸಬೇಕು. ಆಸ್ಪತ್ರೆ, ಶಿಕ್ಷಣ ಸಂಸ್ಥೆ ಸುತ್ತಮುತ್ತ ಹಾಗೂ ನಿಷೇಧಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ಪಟಾಕಿ ಹಚ್ಚಬಾರದು ಎಂದು ಸೂಚನೆ ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

