ಇಂದು ದೇಶದೆಲ್ಲೆಡೆ ದೀಪಗಳ ಹಬ್ಬ ದೀಪಾವಳಿ. ಬದುಕಿನ ಕತ್ತಲನ್ನು ತೊಲಗಿಸಿ ಬೆಳಕು ಬರಲಿ ಎಂದು ಆಚರಿಸುವ ಈ ಸುಂದರ ದಿನವನ್ನು ಎಲ್ಲಾ ಭಾಗಗಳಲ್ಲೂ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಬೆಳಕಿನ ಹಬ್ಬಕ್ಕೆ ನಾಡಿನ ಜನತೆಗೆ ಚಂದನ ವನದ ಚಂದದ ನಟಿಯರು ಶುಭಾಶಯ ಕೋರಿದ್ದಾರೆ.ನಟಿ ರಾಧಿಕಾ ಪಂಡಿತ್, ರಾಗಿಣಿ ದ್ವಿವೇದಿ, ರಚಿತಾ ರಾವ್, ಆಶಿಕಾ ರಂಗನಾಥ್, ರಾಗಿಣಿ ಪ್ರಜ್ವಲ್ ಸೇರಿದಂತೆ ಅನೇಕ ಸ್ಯಾಂಡಲ್‌ವುಡ್ ತಾರೆಯರು ಜನತೆಗೆ ಬೆಳಕಿನ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ರಂಗು ರಂಗಿನ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ, ತಮ್ಮ ಕುಟುಂಬ ಸದಸ್ಯರ ಜೊತೆಗಿನ ಹಬ್ಬದ ಸಂಭ್ರಮವನ್ನು ಹಂಚಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

