Breaking News

ದರ ಏರಿಕೆ ನಡುವೆಯೂ ಹಬ್ಬದ ಸಾಮಾನು ಖರೀದಿಸಿದ ಜನರು…

ಮೈಸೂರು, ನವೆಂಬರ್‌ 13: ದರ ಏರಿಕೆ ನಡುವೆಯೂ ಸಾರ್ವಜನಿಕರು ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ಬೇಕಾದ ಹೂವು, ಹಣ್ಣು, ಹಣತೆ ಹಾಗೂ ಅಲಂಕಾರಿಕ ವಸ್ತುಗಳನ್ನು ಖರೀದಿಸಿದ್ದಾರೆ. ನಗರದ ಪ್ರಮುಖ ಮಾರುಕಟ್ಟೆಗಳಾದ ದೇವರಾಜ ಮಾರುಕಟ್ಟೆ, ಮಂಡಿ ಮಾರ್ಕೆಟ್, ವಾಣಿವಿಲಾಸ ಮಾರುಕಟ್ಟೆ, ಧ್ವನಂತ್ರಿ ರಸ್ತೆ, ಅಗ್ರಹಾರ ವೃತ್ತ, ನಂಜುಮಳಿಗೆ, ಜೆಕೆ ಮೈದಾನದ ರಸ್ತೆ ಸೇರಿದಂತೆ ನಗರದ ನಾನಾ ರಸ್ತೆ ಹಾಗೂ ರಸ್ತೆ ಬದಿಗಳಲ್ಲಿ ಸೋಮವಾರ ಬೆಳಗ್ಗೆಯಿಂದಲೇ ಸಾರ್ವಜನಿಕರು ಉತ್ಸಾಹದಲ್ಲಿ ಹಬ್ಬಕ್ಕೆ ಬೇಕಾದ ಹಣ್ಣು, ಹೂವು, ತರಕಾರಿ, ಪೂಜಾ ಸಾಮಗ್ರಿಗಳನ್ನು ಖರೀದಿಸಿದರು.ನಗರದ ಜೆಕೆ ಗ್ರೌಂಡ್ ಸೇರಿದಂತೆ ನಾನಾ ಕಡೆ ಅಂಗಡಿಗಳ ಮುಂದೆ ಗ್ರಾಹಕರು ಸಾಲುಗಟ್ಟಿ ನಿಂತು ಪಟಾಕಿಗಳನ್ನು ಖರೀದಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಈ ಬಾರಿ ಪಟಾಕಿ ಜತೆಗೆ ಮಣ್ಣಿನ ಹಣತೆ, ಆಕಾಶಬುಟ್ಟಿಗೂ ಡಿಮ್ಯಾಂಡ್ ಕಂಡುಬಂತು.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *