ಬೆಂಗಳೂರು: ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಶಾಸಕರಾದ ಬಿ ವೈ ವಿಜಯೇಂದ್ರ ಅವರನ್ನು ಶುಕ್ರವಾರ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದ್ದು, ಇದೀಗ ಬಿಜೆಪಿ ಹೈಕಮಾಂಡ್ ಗೆ ವಿಪಕ್ಷ ನಾಯಕನ ಆಯ್ಕೆಗೆ ದೊಡ್ಡ ತಲೆನೋವಾಗಿದೆ.ಸುಮಾರು ಆರು ತಿಂಗಳಿಂದ ಪ್ರತಿಪಕ್ಷದ ನಾಯಕನ ಆಯ್ಕೆ ಕುರಿತು ಬಿಜೆಪಿ ಪಾಳಯದಲ್ಲಿ ಚರ್ಚೆಯಾಗುತ್ತಿದ್ದು, ಶುಕ್ರವಾರ ಸಂಜೆ 6 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈಗಾಗಲೇ ವಿಪಕ್ಷ ನಾಯಕನ ಆಯ್ಕೆ ಕುರಿತು ಬಿಜೆಪಿಯ ಕೇಂದ್ರ ಘಟಕದಿಂದ ವೀಕ್ಷಕರು ಆಗಮಿಸಲಿದ್ದಾರೆ.
ಅವರು ಶಾಸಕರೊಂದಿಗೆ ಸಮಾಲೋಚನೆ ನಡೆಸಿ ವಿಧಾನಸಭೆಯ ಪ್ರತಿಪಕ್ಷದ ನಾಯಕನ ಜವಾಬ್ದಾರಿ ಹೊರುವ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಿ, ಹೈಕಮಾಂಡ್ ಮಾಹಿತಿ ನೀಡಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





