ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಅವರು ನಾನು ನೀಡಿದ ಲಿಸ್ಟ್ನದ್ದು ಮಾತ್ರ ಮಾಡಿ ಎಂದು ಸಿಎಂ ವಿಶೇಷ ಕರ್ತವ್ಯಾಧಿಕಾರಿ ಮಹದೇವ್ ಅವರಿಗೆ ಸೂಚಿಸಿರುವ ವಿಡಿಯೋ ವೈರಲ್ ಆಗಿದ್ದು, ಈ ಕುರಿತು ಸಿದ್ದರಾಮಯ್ಯ ಯತೀಂದ್ರ ಅವರು ವರ್ಗಾವಣೆ ಬಗ್ಗೆ ಮಾತಾಡಿಲ್ಲ. ನನ್ನ ರಾಜಕೀಯ ಜೀವನದಲ್ಲಿ ವರ್ಗಾವಣೆ ದಂಧೆ ಮಾಡಿಲ್ಲ. ವರ್ಗಾವಣೆ ದಂಧೆ ಮಾಡಿದ್ದರೆ ರಾಜಕೀಯದಿಂದ ನಿವೃತ್ತಿ ಆಗುತ್ತೇನೆ ಎಂದು ಹೇಳಿದ್ದಾರೆ.
ಶಾಲಾ ಕಟ್ಟಡಗಳನ್ನು ಸಿ.ಎಸ್.ಆರ್. ನಿಧಿಯಿಂದ ನಿರ್ಮಿಸಲಾಗುತ್ತಿದೆ. ಸಚಿವ ಹೆಚ್.ಸಿ.ಮಹದೇವಪ್ಪ ಅವರು ಅದನ್ನು ಪಟ್ಟಿಯಲ್ಲಿ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಸಚಿವ ಮಹದೇವಪ್ಪ ಅವರು ಐದು ಹೆಸರುಗಳಿರುವ ಪಟ್ಟಿ ಕೊಡುತ್ತಾರೆ ಎಂಬ ಆರೋಪದ ಕುರಿತು ಪ್ರತಿಕ್ರಿಯೆ ನೀಡಿ ನನ್ನ ರಾಜಕೀಯ ಜೀವನದಲ್ಲಿ ಹಣಕ್ಕಾಗಿ ಒಂದೇ ಒಂದು ವರ್ಗಾವಣೆಯನ್ನು ಮಾಡಿರುವುದನ್ನು ತೋರಿಸಿದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ತಿಳಿಸಿದರು.
ಅಧಿಕಾರ ಇದ್ದಾಗ ಲಂಚ-ಕಮಿಷನ್ ವ್ಯವಹಾರದಲ್ಲಿ ಮೂರುಹೊತ್ತು ಮುಳುಗೇಳುತ್ತಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಕಾಮಾಲೆ ಕಣ್ಣಿಗೆ ನೋಡಿದ್ದು, ಕೇಳಿದ್ದೆಲ್ಲದರಲ್ಲಿಯೂ ಲಂಚದ ವ್ಯವಹಾರಗಳೇ ಕಾಣಿಸುತ್ತಿದೆ. ವರುಣ ಕ್ಷೇತ್ರದ ಶಾಲೆಗಳ ಅಭಿವೃದ್ದಿಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ನಡೆದಿರುವ ನನ್ನ ಮತ್ತು ನನ್ನಮಗನ ನಡುವಿನ ಪೋನ್ ಸಂಭಾಷಣೆಗೆ ವರ್ಗವಾವಣೆಯಲ್ಲಿ ವಸೂಲಿಯ ಕತೆ ಕಟ್ಟಿ ಕುಮಾರಸ್ವಾಮಿ ಕುಣಿದಾಡುತ್ತಿದ್ದಾರೆ. ಕುಮಾರಸ್ವಾಮಿಯವರ ಈ ಕ್ಷುಲಕ ನಡವಳಿಕೆ ಬಗ್ಗೆ ನಾನು ಕನಿಕರವನ್ನಷ್ಟೇ ವ್ಯಕ್ತಪಡಿಸಬಲ್ಲೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





