ಏಕದಿನ ವಿಶ್ವಕಪ್ ಪಂದ್ಯಾವಳಿಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ 70 ರನ್‌ಗಳ ಗೆಲುವು ಸಾಧಿಸುವ ಮೂಲಕ ಫೈನಲ್ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡ ಅಮೋಘ ಪ್ರದರ್ಶನ ನೀಡಿತು.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 397 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ನಾಯಕ ರೋಹಿತ್ ಶರ್ಮಾ ಆರಂಭದಲ್ಲೇ ಅಬ್ಬರಿಸುವ ಮೂಲಕ ಭಾರತಕ್ಕೆ ಉತ್ತಮ ಆರಂಭ ಒದಗಿಸಿದರು.29 ಎಸೆತಗಳಲ್ಲಿ 4 ಬೌಂಡರಿ 4 ಸಿಕ್ಸರ್ ಸಹಿತ 47 ರನ್ ಸಿಡಿಸುವ ಮೂಲಕ ಭಾರತ ಬೃಹತ್ ಮೊತ್ತ ಗಳಿಸಲು ಅಡಿಪಾಯ ಹಾಕಿದರು. ಶುಭಮನ್ ಗಿಲ್ ಸ್ನಾಯು ಸೆಳೆತಕ್ಕೆ ಒಳಗಾಗಿ ಮೈದಾನದಿಂದ ಹೊರ ನಡೆದರು, ಕೊನೆಯ ಓವರ್ ನಲ್ಲಿ ಬಂದು ಬ್ಯಾಟಿಂಗ್ ಮಾಡಿದರು. ಅವರು 66 ಎಸೆತಗಳಲ್ಲಿ ಅಜೇಯ 80 ರನ್ ಗಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





