ಹಾಸನಾಂಬೆಗೆ ಮಾಡಲಾಗಿದ್ದ ಅಲಂಕಾರ ತೆರವು ಮಾಡಿ ಪೂಜೆ ಬಳಿಕ ಎಲ್ಲರ ಮುಂದೆ ಬೀಗ ಪ್ರದರ್ಶನ ಮಾಡಿ ಬೀಗ ಹಾಕಲಾಗಿದೆ.ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಐದು ಕೋಟಿ ರೂಪಾಯಿ ಆದಾಯ ಬಂದಿದೆ.14 ದಿನಗಳ ಹಾಸನಾಂಬೆ ಉತ್ಸವಕ್ಕೆ ಇಂದು ವಿದ್ಯುಕ್ತವಾಗಿ ತೆರೆ ಬಿದ್ದಿದೆ. ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಅವರ ಸಮ್ಮುಖದಲ್ಲೇ ಗರ್ಭಗುಡಿ ಬಾಗಿಲು ಮುಚ್ಚಲಾಗಿದೆ. ಕಳೆದ 12 ದಿನಗಳಲ್ಲಿ 13 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ.ಇಂದು ಮಧ್ಯಾಹ್ನ 12:23ಕ್ಕೆ ದೇವಾಲಯದ ಗರ್ಭಗುಡಿಯ ಬಾಗಿಲು ಮುಚ್ಚಲಾಗಿದೆ. ವರ್ಷಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬ ದೇವಾಲಯದ ಈ ವರ್ಷದ ಹಾಸನಾಂಬೆ ದರ್ಶನ ಇಂದು ಸಂಪನ್ನವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news




