Breaking News

ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾಳೆ….

ಬಳ್ಳಾರಿ: ಬಳ್ಳಾರಿ ಬಿಜೆಪಿ ಸಂಸದನ ಪುತ್ರನ ಮೇಲೆ ಪ್ರೇಮ ವಂಚನೆ ಆರೋಪ ಕೇಳಿ ಬಂದಿದೆ. ಸಂಸದ ದೇವೇಂದ್ರಪ್ಪ ಅವರ ಪುತ್ರ ರಂಗನಾಥ್ ಅವರ ಮೇಲೆ ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಸಂಪರ್ಕದ ಬಳಿಕ ಮೋಸ ಮಾಡಿದ ಆರೋಪ ಕೇಳಿ ಬಂದಿದೆ.ರಂಗನಾಥ್ ಯುವತಿಯೊಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ, ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ್ದಾರೆ ಎಂದು ದೂರಲಾಗಿದೆ. ಈ ಬಗ್ಗೆ ಸ್ವತ ಯುವತಿ ದೂರು ದಾಖಲಿಸಿದ್ದಾಳೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕನಾಗಿ ಕಾರ್ಯನಿರ್ವಹಿಸುತ್ತಿರುವುದಾಗಿ ರಂಗನಾಥ್ ಹೇಳಿರುವುದಾಗಿ ಬೆಂಗಳೂರು ಮೂಲದ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಯುವತಿ ದೂರಿನನ್ವಯ ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಒಂದೂವರೆ ವರ್ಷದ ಹಿಂದೆ ರಂಗನಾಥ್ ಪಾರ್ಟಿವೊಂದರಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದರಂತೆ. ಬಳಿಕ ಮೈಸೂರಿನ ಹೋಟೆಲ್‌ನಲ್ಲಿ ಆಕೆಯ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಈಗ ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾಳೆ.

Share News

About BigTv News

Check Also

ಗಾಂಜಾಗೆ ಒಂದು ದಮ್ಮು… ಬದುಕಿಗೆ ಶಾಶ್ವತ ಕತ್ತಲು..!

ಗಾಂಜಾ-ಡ್ರಗ್ಸ್‌ಗೆ ಹೇಳಿ ಇಲ್ಲ… ಆರೋಗ್ಯಕರ ಸಮಾಜಕ್ಕೆ ಹೇಳಿ “ಹೌದು”..! ಗಾಂಜಾ-ಡ್ರಗ್ಸ್ ಮುಕ್ತ ಸಮಾಜವೇ ನಮ್ಮ ಸಂಕಲ್ಪ..ಒಂದು ದಮ್ಮಿಗೆ ಎಂದು ಆರಂಭವಾಗುವ …

Leave a Reply

Your email address will not be published. Required fields are marked *