Breaking News

ನಟ ಯೋಗಿ ಬೆಂಗಳೂರಿನಲ್ಲಿ ತಮಿಳು ಮಾತನಾಡಿ ಕನ್ನಡಿಗರ ಕೆಂಗಣ್ಣಿಗೆ ಗುರಿ….

ಲೂಸ್ ಮಾದ ಯೋಗಿ ನಟನೆಯ ‘ರೋಸಿ’ ಸಿನಿಮಾ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈ ಚಿತ್ರದಲ್ಲಿ ತಮಿಳು ಡ್ಯಾನ್ಸ್ ಮಾಸ್ಟರ್ ಸ್ಯಾಂಡಿ ಖಡಕ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಸ್ಯಾಂಡಿ ಫಸ್ಟ್ ಲುಕ್ ರಿವೀಲ್ ಆಗಿತ್ತು. ಇದೆಲ್ಲದರ ಮಧ್ಯೆ ನಟ ಯೋಗಿ ಬೆಂಗಳೂರಿನಲ್ಲಿ ತಮಿಳು ಮಾತನಾಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಒಂದ್ಕಾಲದಲ್ಲಿ ಲೂಸ್ ಮಾದ ಯೋಗಿ ಸಿನಿಮಾಗಳಿಗೆ ಭಾರೀ ಕ್ರೇಜ್ ಇತ್ತು. ಆದರೆ ಈಗ ಅಷ್ಟಾಗಿ ಯೋಗಿ ಸಿನಿಮಾಗಳು ಸದ್ದು ಮಾಡ್ತಿಲ್ಲ. ಅವರ 50ನೇ ಸಿನಿಮಾ ‘ರೋಸಿ’ ಬಹಳ ಕುತೂಹಲ ಮೂಡಿಸಿದೆ. ‘ಹೆಡ್‌ಬುಷ್’ ಸಿನಿಮಾ ಮಾಡಿದ್ದ ಶೂನ್ಯ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ರಾಜಾಜಿ ನಗರದ ನವರಂಗ್ ಥಿಯೇಟರ್ ಆವರಣದಲ್ಲಿ ಚಿತ್ರದ ಮುಹೂರ್ತ ನೆರವೇರಿಸಿ ಪೋಸ್ಟರ್ ಅನಾವರಣ ಮಾಡಿ ಚಿತ್ರಕ್ಕೆ ಚಾಲನೆ ನೀಡಲಾಗಿತ್ತು. ರೋಸಿ’ ಸಿನಿಮಾ ಚಿತ್ರೀಕರಣ ಸಾಗುತ್ತಿದ್ದು ಚಿತ್ರದ ಒಂದೊಂದೇ ಪಾತ್ರವನ್ನು ಪರಿಚಯಿಸಲಾಗುತ್ತಿದೆ. ರೋಸಿ ಭಾಯ್ ಆಗಿ ಚಿತ್ರದಲ್ಲಿ ಯೋಗಿ ಅಬ್ಬರಿಸಲಿದ್ದಾರೆ. ಬಳೆ ರೀತಿಯ ಮೂಗತಿ ಧರಿಸಿ, ಸಿಗರೇಟ್‌ ಸೇದುತ್ತಾ ಯೋಗಿ ಕಾಣಿಸಿಕೊಂಡಿದ್ದ ಫಸ್ಟ್ ಲುಕ್ ಪೋಸ್ಟರ್ ವೈರಲ್ ಆಗಿತ್ತು. ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿ ಸಿನಿಮಾ ಬಗ್ಗೆ ಮಾಹಿತಿ ನೀಡಿತ್ತು ಚಿತ್ರತಂಡ.

Share News

About BigTv News

Check Also

ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!

ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ …

Leave a Reply

Your email address will not be published. Required fields are marked *