ಬೆಂಗಳೂರು: ಕರ್ನಾಟಕ ವಿಧಾನಸಭೆಯ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ರೆಸಾರ್ಟ್ ಪಾಲಿಟಿಕ್ಸ್ ಆರಂಭಿಸಿದ್ದಾರೆ. ಜೆಡಿಎಸ್ ಶಾಸಕರ ಜೊತೆ ಚಿಕ್ಕಮಗಳೂರಿನ ರೆಸಾರ್ಟ್‌ನಲ್ಲಿ ಅವರು ವಾಸ್ತವ್ಯ ಹೂಡಲಿದ್ದು, ಹಲವು ವಿಚಾರಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆ ಇದೆ.ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಜೆಡಿಎಸ್‌ನ ಹಿರಿಯ ಶಾಸಕರ ಸಭೆ ನಡೆಸಿದ ಹಿನ್ನಲೆಯಲ್ಲಿ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಎಚ್. ಡಿ. ಕುಮಾರಸ್ವಾಮಿ ರೆಸಾರ್ಟ್ ರಾಜಕೀಯ ಆರಂಭಿಸಿದ್ದಾರೆ. ಎರಡು ದಿನಗಳ ಹಿಂದೆ ಜೆಡಿಎಸ್‌ನ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಸೇರಿದ್ದಾರೆ.ಚಿಕ್ಕಮಗಳೂರಿನ ರೆಸಾರ್ಟ್‌ನಲ್ಲಿ ಎಚ್. ಡಿ. ಕುಮಾರಸ್ವಾಮಿ ಶಾಸಕರ ಜೊತೆ ವಾಸ್ತವ್ಯ ಹೂಡಲಿದ್ದಾರೆ. ವಿಧಾನ ಪರಿಷತ್ ಸದಸ್ಯರು ಸಹ ಜೊತೆ ಇರಲಿದ್ದಾರೆ. ಭಾನುವಾರ ನಡೆಯುವ ಎಂಎಲ್‌ಸಿ, ಜೆಡಿಎಸ್ ನಾಯಕ ಭೋಜೇಗೌಡರ ಮಗಳ ನಿಶ್ಚಿತಾರ್ಥ ಕಾರ್ಯಕ್ರಮದ ನೆಪದಲ್ಲಿ ಶಾಸಕರು ರೆಸಾರ್ಟ್ ಸೇರುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





