Breaking News

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 02 ಟರ್ಮಿನಲ್‌ ಗಳಲ್ಲಿ ತಲಾ ಒಂದು ಇಂದಿರಾ ಕ್ಯಾಟೀನ್ ನಿರ್ಮಿಸಲಿದೆ….

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಟ್ಯಾಕ್ಸಿ ಚಾಲಕರು, ಮಧ್ಯಮ ವರ್ಗದವರಿಗೆ, ಅಲ್ಲಿನ ಸಿಬ್ಬಂದಿಗೆ ಸಿಹಿ ಸುದ್ದಿಯೊಂದು ಲಭಿಸಿದೆ. ಅದೇನೆಂದರೆ ವಿಮಾನ ನಿಲ್ದಾಣದಲ್ಲಿ ಸಹ ಅತೀ ಕಡಿಮೆ ಬೆಲೆಗೆ ಊಟ-ತಿಂಡಿ ಸೌಲಭ್ಯ ಸಿಗಲಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಹತ್ವಾಕಾಂಕ್ಷೆಯ ಯೋಜನೆಗಳ ಪೈಕಿ ಇಂದಿರಾ ಕ್ಯಾಂಟೀನ್ ಸಂಖ್ಯೆಗಳನ್ನು ಹೆಚ್ಚಿಸುವುದು ಒಂದಾಗಿದೆ. ಇದೇ ಕಾರಣದಿಂದಲೇ ಹಾಲಿ ಇರುವ 199 ಇಂದಿರಾ ಕ್ಯಾಂಟೀನ್‌ಗಳನ್ನು 250ಕ್ಕೆ ಹೆಚ್ಚಿಸಲು ಸರ್ಕಾರ ಅನುಮತಿ ನೀಡಿದೆ. ಸದ್ಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (BBMP) ಬೆಂಗಳೂರು ವಿಮಾನ ನಿಲ್ದಾಣದಲ್ಲಿ 02 ಟರ್ಮಿನಲ್‌ ಗಳಲ್ಲಿ ತಲಾ ಒಂದು ಇಂದಿರಾ ಕ್ಯಾಟೀನ್ ನಿರ್ಮಿಸಲಿದೆ. ನೀವು ಇಲ್ಲಿ ಐದು ರೂಪಾಯಿಗೆ ಉಪಹಾರ ಮತ್ತು ಕೇವಲ ಹತ್ತು ರೂಪಾಯಿಗೆ ಊಟ ಪಡೆಯಬಹುದಾಗಿದೆ.

Share News

About BigTv News

Check Also

10 ದಿನಗಳಲ್ಲಿ ನ್ಯಾಯ ಸಿಗದಿದ್ದರೆ ಸಲ್ಲೇಖನ ವ್ರತ! ಸರ್ಕಾರಕ್ಕೆ ಗುಣಧರನಂದಿ ಸ್ವಾಮೀಜಿಗಳ ಕೊನೆಯ ಎಚ್ಚರಿಕೆ…

ಜೈನ ನಿಗಮ ಮಂಡಳಿ ಸ್ಥಾಪನೆಗೆ ಆಗ್ರಹ: ಚಿಕ್ಕೋಡಿಯಿಂದ ಸುವರ್ಣಸೌಧದವರೆಗೆ ಪಾದಯಾತ್ರೆ ಘೋಷಣೆ! ಜೈನ ಸಮುದಾಯದ ಬೇಡಿಕೆ ಈಡೇರದಿದ್ದರೆ ಸಲ್ಲೇಖನ ವ್ರತದ …

Leave a Reply

Your email address will not be published. Required fields are marked *