Breaking News

ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ಗಣ್ಯರು ಪಂದ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ….

ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ 2023ರ ಐಸಿಸಿ ವಿಶ್ವಕಪ್ ಪ್ರಶಸ್ತಿಗಾಗಿ ಭಾನುವಾರ, ನವೆಂಬರ್ 19ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಸೆಣಸಾಟ ನಡೆಸಲಿದೆ. ಅತಿ ದೊಡ್ಡ ಕ್ರೀಡಾಕೂಟಗಳಲ್ಲಿ ಒಂದು ಎಂದು ಹೇಳಲಾಗುವ ಏಕದಿನ ವಿಶ್ವಕಪ್‌ನ ಹೈ-ವೋಲ್ಟೇಜ್ ಪಂದ್ಯವು ಹಲವು ಗಣ್ಯಾತಿಗಣ್ಯರಿಂದ ಅಲಂಕರಿಸಲ್ಪಡುವ ಸಾಧ್ಯತೆಯಿದೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ಗಣ್ಯರು ಪಂದ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ. ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರನ್ನು ಸಹ ಆಹ್ವಾನಿಸಲಾಗಿದೆ. ಅವರು ಫೈನಲ್‌ ಪಂದ್ಯದ ದಿನ ಬಂದಿಳಿಯುವ ಸಾಧ್ಯತೆಯೂ ಇದೆ.ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ಭಾನುವಾರ ಮಧ್ಯಾಹ್ನ ನರೇಂದ್ರ ಮೋದಿ ಅವರು ಫೈನಲ್ ಪಂದ್ಯ ವೀಕ್ಷಿಸಲು ಬಂದಿಳಿಯಲಿದ್ದಾರೆ ಎಂದು ಗುಜರಾತ್ ಪೊಲೀಸ್ ಮೂಲಗಳು ತಿಳಿಸಿವೆ. ಗಾಂಧಿನಗರದ ರಾಜಭವನದಲ್ಲಿ ರಾತ್ರಿ ತಂಗುವ ಸಾಧ್ಯತೆ ಇದೆ.

Share News

About BigTv News

Check Also

IPL 2025 : ಮೊದಲ ಪಂದ್ಯದಲ್ಲಿ ಗೆದ್ದು ಬಿಗಿದ ಆರ್‌ಸಿಬಿ

ಐಪಿಎಲ್ 2025ರ ಭಾಗವಾಗಿ ಆರ್ ಸಿ ಬಿ ವಿರುದ್ಧ ಪಂದ್ಯದಲ್ಲಿ ಕೆಕೆಆರ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡು ನಿಗದಿತ 20 …

Leave a Reply

Your email address will not be published. Required fields are marked *