Breaking News

ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಬೆಸ್ಕಾಂಗೆ ದಂಡ……

ಬೆಂಗಳೂರು: ಅಕ್ರಮ ವಿದ್ಯುತ್ ಸಂಪರ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಬೆಸ್ಕಾಂಗೆ ದಂಡ ಪಾವತಿ ಮಾಡಿದ್ದಾರೆ. ದೀಪಾವಳಿ ಪ್ರಯುಕ್ತ ಜೆ.ಪಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ದೀಪಾವಳಿ ಅಲಂಕಾರಕ್ಕಾಗಿ ವಿದ್ಯುತ್ ಕಂಬದಿಂದ ನೇರ ಸಂಪರ್ಕ ಪಡೆದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಹೆಚ್‌ಡಿ ಕುಮಾರಸ್ವಾಮಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂದು ಕಾಂಗ್ರೆಸ್ ವಿಡಿಯೋ ಸಮೇತ ‘ವಿದ್ಯುತ್ ಕಳ್ಳ’ ಎನ್ನುವ ಆರೋಪ ಮಾಡಿತ್ತು. ಇದರ ಬೆನ್ನಲ್ಲೆ ಬೆಸ್ಕಾಂ ವಿಧಿಸಿದ 68,526 ರೂಪಾಯಿ ದಂಡದ ಮೊತ್ತವನ್ನು ಕುಮಾರಸ್ವಾಮಿ ಪಾವತಿಸಿದ್ದಾರೆ. ಬೆಂಗಳೂರಿನ ಜೆಪಿ ಭವನ ಜೆಡಿಎಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೆಚ್‌ಡಿ ಕುಮಾರಸ್ವಾಮಿ ಅವರು, ನಾನು ಪ್ರಾಮಾಣಿಕವಾಗಿ ದಂಡ ಕಟ್ಟಿದ್ದೇನೆ. ಬೆಸ್ಕಾಂ ಅವರು ಸೂಚಿಸಿದ ದಂಡವನ್ನು ಕಟ್ಟಿದ್ದೇನೆ. ಕರೆಂಟ್‌ ಕಳ್ಳ ಎಂದು ಕರೆಯುವುದು ನಿಲ್ಲಿಸಿ. ನಿಮ್ಮಷ್ಟು ಕಳ್ಳತನ ಮಾಡಿಲ್ಲ. ನೀವು ಹಗಲು ದರೋಡೆಕೋರರು ಎಂದು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು.

Share News

About BigTv News

Check Also

ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!

ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ …

Leave a Reply

Your email address will not be published. Required fields are marked *