Breaking News

ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಪೈಪೋಟಿ ನಡೆಸಲಿದೆ.

ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಪೈಪೋಟಿ ನಡೆಸಲಿದೆ. ಈ ಬಹು ನಿರೀಕ್ಷಿತ ಪಂದ್ಯಕ್ಕೆ ಇನ್ನು ಕೆಲವೇ ಗಂಟೆಗಳು ಮಾತ್ರವೇ ಬಾಕಿಯಿದೆ. ಇನ್ನು ಈ ಫೈನಲ್ ಪಂದ್ಯಕ್ಕೂ ಮುನ್ನ ಎರಡು ತಂಡಗಳ ಅಭಿಮಾನಿಗಳು ಹಲವಾರು ದೃಷ್ಟಿಕೋನದಿಂದ ಬೇರೆ ಬೇರೆ ರೀತಿಯಲ್ಲಿ ಲೆಕ್ಕಾಚಾರಗಳನ್ನು ಸಹಜವಾಗಯೇ ಮಾಡುತ್ತಾರೆ.
ಪಂದ್ಯದ ಸಂದರ್ಭದಲ್ಲಿ ಹವಾಮಾನ ಹೇಗಿರಲಿದೆ? ಆಡುವ ಬಳಗದಲ್ಲಿ ಯಾರಿಗೆಲ್ಲಾ ಅವಕಾಶ ದೊರೆಯಲಿದೆ? ಪಿಚ್ ಯಾವ ರೀತಿ ವರ್ತಿಸಬಹುದು? ಹೀಗೆ ನಾನಾ ವಿಚಾರಗಳ ಬಗ್ಗೆ ಅಭಿಮಾನಿಗಳು ಕೂಡ ಚರ್ಚೆಗಳನ್ನು ಮಾಡುತ್ತಿರುತ್ತಾರೆ. ಇದೀಗ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಫೈನಲ್ ಪಂದ್ಯಕ್ಕೂ ಮುನ್ನ ಈ ಪಂದ್ಯ ನಡೆಯಲಿರುವ ಪಿಚ್ ವಿಚಾರವಾಗಿ ಪ್ರಮುಖ ಮಾಹಿತಿಯೊಂದು ಹೊರಬಿದ್ದಿದೆ.ಪಿಚ್ ಆಯ್ಕೆ ಹಾಗೂ ಸಿದ್ಧಪಡಿಸುವ ವಿಚಾರದಲ್ಲಿ ಬಿಸಿಸಿಐ ಮಧ್ಯಸ್ಥಿಕೆ ವಹಿಸುತ್ತಿದ ಎನ್ನುವ ವಿಚಾರಗಳು ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಆಗಾಗ ಕೇಳಿ ಬಂದಿದೆ. ಭಾರತ ತಂಡಕ್ಕೆ ಅನುಕೂಲಕರವಾಗುವಂತೆ ಪಿಚ್‌ಗಳನ್ನು ಸಿದ್ಧಪಡಿಸಲಾಗಿದೆ ಎನ್ನುವ ಆರೋಪಗಳು ಕೂಡ ಕೇಳಿ ಬಂದಿತ್ತು.

ಇದರ ಬೆನ್ನಲ್ಲೇ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯವನ್ನು ಯಾವ ಪಿಚ್‌ನಲ್ಲಿ ಆಡಲಿದೆ ಎನ್ನುವುದು ಬಹಿರಂಗವಾಗಿದೆ. ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯಕ್ಕೆ ಹೊಸ ಪಿಚ್‌ನ ಬದಲಾಗಿ ಈಗಾಗಲೇ ಬಳಸಿರುವ ನಿಧಾನಗತಿಯ ಪಿಚ್ ಬಳಸುವ ಸಾಧ್ಯತೆ ಇದೆ ಎನ್ನಲಾಗಿದೆ.

Share News

About BigTv News

Check Also

IPL 2025 : ಮೊದಲ ಪಂದ್ಯದಲ್ಲಿ ಗೆದ್ದು ಬಿಗಿದ ಆರ್‌ಸಿಬಿ

ಐಪಿಎಲ್ 2025ರ ಭಾಗವಾಗಿ ಆರ್ ಸಿ ಬಿ ವಿರುದ್ಧ ಪಂದ್ಯದಲ್ಲಿ ಕೆಕೆಆರ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡು ನಿಗದಿತ 20 …

Leave a Reply

Your email address will not be published. Required fields are marked *