ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್- B ಸಿನಿಮಾ ರಿಲೀಸ್ ಆಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಸೆಪ್ಟೆಂಬರ್ 1ರಂದು ಚಿತ್ರದ ಮೊದಲ ಭಾಗ ರಿಲೀಸ್ ಆಗಿತ್ತು. 2ನೇ ಭಾಗ ಈ ಪ್ರೇಕ್ಷಕರನ್ನು ರಂಜಿಸುತ್ತಿದೆ. ಭಾವನಾತ್ಮಕ ಕತೆಗೆ ಸಿನಿರಸಿಕರು ಫಿದಾ ಆಗಿದ್ದಾರೆ. ಹೇಮಂತ್ ರಾವ್ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ರುಕ್ಮಿಣಿ ವಸಂತ್ ಹಾಗೂ ಚೈತ್ರಾ ಆಚಾರ್ ನಾಯಕಿಯರಾಗಿ ಮಿಂಚಿದ್ದಾರೆ. ಕನ್ನಡ ಜೊತೆಗೆ ತೆಲುಗು, ತಮಿಳು, ಮಲಯಾಳಂನಲ್ಲೂ ಸಿನಿಮಾ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಕರ್ನಾಟಕದಲ್ಲಿ ಒಂದು ದಿನ ಮೊದ್ಲೆ ಪೇಯ್ಡ್ ಪ್ರೀಮಿಯರ್ ಶೋಗಳು ಆರಂಭವಾಗಿತ್ತು. ಸೈಡ್- A ನೋಡಿದ್ದವರು ಮುಗಿಬಿದ್ದು ಸೈಡ್- B ನೋಡಿದ್ದಾರೆ.
ತಮಿಳುನಾಡು ಸಚಿವ, ತಮಿಳು ನಟ ಉದಯನಿಧಿ ಸ್ಟಾಲಿನ್ ಕೂಡ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. “ಸಪ್ತಸಾಗರದಾಚೆ ಎಲ್ಲೋ ಸೈಡ್- B ಸಿನಿಮಾ ಬಹಳ ಅದ್ಭುತವಾಗಿ ಮೂಡಿ ಬಂದಿದೆ. ರಕ್ಷಿತ್ ಶೆಟ್ಟಿ ಮತ್ತು ತಂಡಕ್ಕೆ ಅಭಿನಂದನೆ. ನೀವು ನಿಜಕ್ಕೂ ಸಿನಿಮಾ ಮಾಂತ್ರಿಕರು. ಎಲ್ಲರೂ ಹೋಗಿ ಥಿಯೇಟರ್‌ನಲ್ಲೇ ಸಿನಿಮಾ ನೋಡಿ” ಎಂದು ಉದಯನಿಧಿ ಸ್ಟಾಲಿನ್ ಟ್ವೀಟ್ ಮಾಡಿದ್ದಾರೆ. ಉದಯನಿಧಿ ಟ್ವೀಟ್‌ಗೆ ರಕ್ಷಿತ್ ಶೆಟ್ಟಿ ಧನ್ಯವಾದ ತಿಳಿಸಿದ್ದಾರೆ. ತಮಿಳುನಾಡು ಸರ್ಕಾರದಲ್ಲಿ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವರಾಗಿ ಉದಯನಿಧಿ ಸ್ಟಾಲಿನ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಇತ್ತೀಚೆಗೆ ಸನಾತನ ಧರ್ಮ ಕುರಿತು ಉದಯನಿಧಿ ಹೇಳಿಗೆ ಭಾರೀ ವಿವಾದ ಸೃಷ್ಟಿಸಿತ್ತು. ಚೆನ್ನೈ ಸಮಾವೇಶವೊಂದರಲ್ ಮಾತಾನಾಡಿದ್ದ ಉದಯನಿಧಿ “ಕೆಲವು ನಾವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ, ಬದಲಿಗೆ ರದ್ದುಗೊಳಿಸಬೇಕು. ಉದಾಹರಣೆಗೆ ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೊನಾವನ್ನು ವಿರೋಧಿಸಲು ಸಾಧ್ಯವಿಲ್ಲ. ನಾವು ಅವುಗಳನ್ನು ನಿರ್ಮೂಲನೆ ಮಾಡಬೇಕು. ಅದೇ ರೀತಿಯಲ್ಲಿ ನಾವು ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕಿದೆ” ಎಂದಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





