ಬೆಂಗಳೂರು: ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. ‘ವರ್ಗಾವರ್ಗಿ ಬಜೆಟ್’ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ! 6 ತಿಂಗಳ ಭರ್ಜರಿ ʼಅತೀಂದ್ರೀಯʼ ಅಟ್ಟಹಾಸ!! ‘ಕಾಸಿಗಾಗಿ ಹುದ್ದೆ& ಕಾಂಗ್ರೆಸ್ ಹುಂಡಿ’ ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-TCM ನಿರ್ಮಾಪಕ, ಡೂಪ್ಲಿಕೇಟ್ ಸಿಎಂ-DCM ನಿರ್ದೇಶಕ.. ಹೇಗಿದೆ? ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ! ನಾಲಿಗೆ ಮೇಲೆ ನೈತಿಕತೆಯ ನಾಟ್ಯ!! ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ!! ಕೊನೆಗೆ, ಝಣ ಝಣ ಕಾಂಚಾಣ. ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ಥೂ.. ನಾಚಿಕೆ ಆಗಬೇಕು ಎಂದು ಕಾಸಿಗಾಗಿ ಹುದ್ದೆ ಎಂಬ ಹ್ಯಾಶ್ ಟ್ಯಾಗ್ ಬಳಸಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ!? ಓಹ್! ಒಂದು ಸರಕಾರ! ವಿಸ್ಮಯಗಳ ಆಗರ!!ಡೂಪ್ಲಿಕೇಟ್ ಸಿಎಂ-DCM ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ CSR ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಗಾರಿಕೆಗೆ ನೂರೆಂಟು ನಮನ ಎಂದು ಕುಮಾರಸ್ವಾಮಿ ಕುಟುಕಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





