Breaking News

ಬಿಜೆಪಿ ಹೈಕಮಾಂಡ್‌ ವಿಪಕ್ಷ ನಾಯಕನಾಗಿ ಆರ್‌ ಅಶೋಕ್‌ ಆಯ್ಕೆ….

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾಗಿ ಬರೋಬ್ಬರಿ ಆರು ತಿಂಗಳ ನಂತರ ಬಿಜೆಪಿ ಹೈಕಮಾಂಡ್‌ ವಿಪಕ್ಷ ನಾಯಕನಾಗಿ ಆರ್‌ ಅಶೋಕ್‌ ಆಯ್ಕೆ ಮಾಡಿದ್ದು, ನೂತನವಾಗಿ ಆಯ್ಕೆಯಾದ ಆರ್‌ ಅಶೋಕ್‌ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಸ್ಥಾನಗಳ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಸ್ಥಾನಗಳ ಕುರಿತು ಆರ್‌ ಅಶೋಕ್‌ ಮಾತನಾಡಿ, ರಾಜ್ಯದ ಎಲ್ಲ 28 ಲೋಕಸಭಾ ಸ್ಥಾನಗಳಲ್ಲೂ ಬಿಜೆಪಿ ಗೆಲುವು ಸಾಧಿಸಲು ಶ್ರಮಿಸುವುದಾಗಿ ಹೇಳಿದ್ದಾರೆ. ನಮಗಿಂದು ಮೋದಿಜೀ, ನಡ್ಡಾಜೀ, ಅಮಿತ್ ಶಾಜೀ ಅವರಂಥ ಪ್ರಬಲ ನಾಯಕತ್ವ ಸಿಕ್ಕಿದೆ. ಕಳೆದ 6 ತಿಂಗಳ ಕಾಂಗ್ರೆಸ್ ದುರಾಡಳಿತ, ಭ್ರಷ್ಟಾಚಾರ, ಸ್ವತಃ ಮುಖ್ಯಮಂತ್ರಿಗಳ ಮಗ ವರ್ಗಾವಣೆ ದಂಧೆಯಲ್ಲಿ ಪಾಲ್ಗೊಂಡಿದ್ದನ್ನು ಕಂಡು ಜನರೂ ಬೇಸತ್ತಿದ್ದಾರೆ.

ಬೆಂಗಳೂರು ಗ್ರಾಮಾಂತರ, ಕನಕಪುರ ಸೇರಿ ರಾಜ್ಯದ 28ಕ್ಕೆ 28 ಸ್ಥಾನಗಳಲ್ಲಿ ನಾವು ಗೆಲ್ಲುತ್ತೇವೆ. ಕಳೆದ ಬಾರಿಯ 25 ಸ್ಥಾನಗಳ ಬದಲು 28 ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದು, ಕಳೆದ ವಿಧಾನಸಭೆಯಲ್ಲಿ 66 ಶಾಸಕರು ಕೂಡ ವಿರೋಧ ಪಕ್ಷದ ನಾಯಕರಿಲ್ಲದೆ ಸಮರ್ಥ ವಿಪಕ್ಷವಾಗಿ ಕೆಲಸ ಮಾಡಿದ್ದೇವೆ. ಪ್ರಬಲವಾದ ಹೋರಾಟವನ್ನು ಬಿಜೆಪಿ ಮಾಡಿದೆ. ಎಲ್ಲ ಹಿರಿಯರ ಕಿರಿಯರ ಸಹಕಾರ, ವಿಶ್ವಾಸದೊಂದಿಗೆ ಹೋರಾಟ ರೂಪಿಸುವುದಾಗಿ ತಿಳಿಸಿದರು.

Share News

About BigTv News

Check Also

ಕರ್ತವ್ಯ ಆ್ಯಪ್‌ಗೆ ಖಾಕಿ ಕಿಡಿ..! | 24×7 ಡ್ಯೂಟಿ ಪೊಲೀಸರಿಗೆ ಹೊಸ ಹಾಜರಾತಿ ತಲೆನೋವುಹಾಜರಾತಿ ಕಡ್ಡಾಯಕ್ಕೆ ಪೊಲೀಸರ ವಿರೋಧ..!

ಕರ್ತವ್ಯ ಆ್ಯಪ್‌ಗೆ ಪೊಲೀಸರ ನೋ ಎಂಟ್ರಿ! | ಖಾಕಿಗೆ ಹೊಸ ರೂಲ್ಸ್‌ ಮೇಲೆ ಆಕ್ರೋಶ… ಖಾಕಿಗೆ ಕರ್ತವ್ಯ ಆ್ಯಪ್ ಶಾಕ್! …

Leave a Reply

Your email address will not be published. Required fields are marked *