Breaking News

ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಬಿಡುಗಡೆಗೆ ದಿನಗಣನೆ ಶುರು…

ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಹೊಂಬಾಳೆ ಸಂಸ್ಥೆ ಬಹಳ ಅದ್ಧೂರಿಯಾಗಿ ಈ ಸಿನಿಮಾ ನಿರ್ಮಾಣ ಮಾಡಿದೆ. 2 ಭಾಗಗಳಾಗಿ ಈ ಆಕ್ಷನ್ ಎಂಟರ್‌ಟೈನರ್ ಸಿನಿಮಾ ಪ್ರೇಕ್ಷಕರ ಮುಂದೆ ಬರಲಿದೆ. ಪ್ರಶಾಂತ್‌ ನೀಲ್ ನಿರ್ದೇಶನದಲ್ಲಿ ಪ್ರಭಾಸ್ ಆರ್ಭಟ ನೋಡೋಕೆ ಅಭಿಮಾನಿಗಳು ಉತ್ಸುಕರಾಗಿದ್ದಾರೆ.

ಡಿಸೆಂಬರ್ 1ಕ್ಕೆ ‘ಸಲಾರ್’ ಟ್ರೈಲರ್ ರಿಲೀಸ್ ಆಗಲಿದೆ. ಯಾವ ಭಾಗದಲ್ಲಿ ಯಾರು ‘ಸಲಾರ್’ ಚಿತ್ರವನ್ನು ವಿತರಣೆ ಮಾಡುತ್ತಾರೆ? ಎನ್ನುವ ಬಗ್ಗೆಯೂ ಚಿತ್ರತಂಡ ಮಾಹಿತಿ ಕೊಡುತ್ತಿದೆ. ಕರ್ನಾಟಕದಲ್ಲಿ ಹೊಂಬಾಳೆ ಸಂಸ್ಥೆಯ ಸಿನಿಮಾ ರಿಲೀಸ್ ಜವಾಬ್ದಾರಿ ವಹಿಸಿಕೊಂಡಿದೆ. ವಿಶ್ವದಾದ್ಯಂತ 5000 ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ‘ಸಲಾರ್’ ದರ್ಬಾರ್ ಶುರುವಾಗಲಿದೆ. ಸಿನಿಮಾ ಕತೆಯ ಬಗ್ಗೆ ಕುತೂಹಲ ಹೆಚ್ಚಾಗುತ್ತಲೇಯಿದೆ.
KGF’ ಸರಣಿಗೆ ಕೆಲಸ ಮಾಡಿದ ಬಹುತೇಕ ತಂಡ ‘ಸಲಾರ್’ ಸರಣಿಗೆ ಕೈ ಜೋಡಿಸಿದೆ. ಪೃಥ್ವಿರಾಜ್‌ ಸುಕುಮಾರನ್, ಜಗಪತಿ ಬಾಬು, ಈಶ್ವರಿ ರಾವ್ ಸೇರಿದಂತೆ ದೊಡ್ಡ ತಾರಾಗಣ ಈ ಚಿತ್ರದಲ್ಲಿದೆ. ಶ್ರುತಿ ಹಾಸನ್ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಸಿನಿಮಾ ಕತೆ ಬಗ್ಗೆ ಚಿತ್ರತಂಡ ಈವರೆಗೆ ಸುಳಿವು ಬಿಟ್ಟುಕೊಟ್ಟಿಲ್ಲ. ಇನ್ನು ಪೋಸ್ಟರ್‌ಗಳು, ಟೀಸರ್ ಬಿಟ್ಟರೆ ಸಿನಿಮಾ ಬಗ್ಗೆ ಹೆಚ್ಚಿನ ಕಂಟೆಂಟ್ ಕೂಡ ಹೊರ ಬಂದಿಲ್ಲ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಲೀಕಾಸುರರ ಆರ್ಭಟ ಮುಂದುವರೆದಿದೆ.

Share News

About BigTv News

Check Also

ಅಭಿಮಾನಿಗಳಿಗೆ ಶಾಕ್ ಡಾಲಿ

ಡಾಲಿ ಧನಂಜಯ್ ಹುಟ್ಟುಹಬ್ಬದ ಹಿನ್ನೆಲೆ ತನ್ನ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ಈ ಬಾರಿ ತಾವು ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಸಿಗುವುದಿಲ್ಲ ಎಂದು …

Leave a Reply

Your email address will not be published. Required fields are marked *