Breaking News

ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಡುವ 11 ಬಳಗ ಹೇಗಿರಲಿದೆ ಎನ್ನುವುದು ಸಹಜವಾಗಿಯೇ ಕುತೂಹಲ ಮೂಡಿಸಿದೆ….

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಭಾನುವಾರ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲು ಸಿದ್ಧವಾಗಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಈ ಪಂದ್ಯಕ್ಕೆ ಆತಿಥ್ಯವಹಿಸಲಿದ್ದು ಕ್ರಿಕೆಟ್ ಜಗತ್ತು ಈ ಪಂದ್ಯದ ಮೇಲೆ ಚಿತ್ತ ನೆಟ್ಟಿದೆ. ಇನ್ನು ಟೀಮ್ ಇಂಡಿಯಾ ಸುಮಾರು ಒಂದು ದಶಕದಿಂದ ಯಾವುದೇ ಐಸಿಸಿ ಟ್ರೋಫಿ ಗೆಲ್ಲಲು ಸಾಧ್ಯವಾಗಿರಲಿಲ್ಲ. ಈ ವಿಶ್ವಕಪ್ ಮೂಲಕ ಭಾರತದ ಈ ಐಸಿಸಿ ಟ್ರೋಫಿಯ ಬರ ನೀಗಲಿದೆ ಎನ್ನುವ ನಿರೀಕ್ಷೆ ಕೋಟ್ಯಂತರ ಅಭಿಮಾನಿಗಳಲ್ಲಿದೆ. ಟೀಮ್ ಇಂಡಿಯಾ ಈ ಬಾರಿಯ ವಿಶ್ವಕೊ್ ಟೂರ್ನಿಯಲ್ಲಿ ಆರಂಭದಿಂದಲೇ ಅಬ್ಬರದ ಪ್ರದರ್ಶನ ನೀಡುತ್ತಾ ಬಂದಿದ್ದು ಎಲ್ಲಾ ಪಂದ್ಯದಲ್ಲಿಯೂ ಗೆಲುವು ಸಾಧಿಸಿದೆ. ಹೀಗಾಗಿ ಅದೇ ರೀತಿಯ ಪ್ರದರ್ಶನವನ್ನು ಫೈಬಲ್ ಪಂದ್ಯದಲ್ಲಿಯೂ ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ತನ್ನ ಅತ್ಯುತ್ತಮ ಪ್ರದರ್ಶನದ ವಿಶ್ವಾಸ ಮೂಡಿಸಿದೆ.ಹಾಗಾದರೆ ಈ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಡುವ 11 ಬಳಗ ಹೇಗಿರಲಿದೆ ಎನ್ನುವುದು ಸಹಜವಾಗಿಯೇ ಕುತೂಹಲ ಮೂಡಿಸಿದೆ.

Share News

About BigTv News

Check Also

IPL 2025 : ಮೊದಲ ಪಂದ್ಯದಲ್ಲಿ ಗೆದ್ದು ಬಿಗಿದ ಆರ್‌ಸಿಬಿ

ಐಪಿಎಲ್ 2025ರ ಭಾಗವಾಗಿ ಆರ್ ಸಿ ಬಿ ವಿರುದ್ಧ ಪಂದ್ಯದಲ್ಲಿ ಕೆಕೆಆರ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡು ನಿಗದಿತ 20 …

Leave a Reply

Your email address will not be published. Required fields are marked *