2023ರ ವಿಶ್ವಕಪ್ ಅಂತಿಮ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಭಾನುವಾರ ಅಹ್ಮದಾಬಾದ್‌ನಲ್ಲಿ ನಡೆಯಲಿದೆ. ಪ್ರಸಕ್ತ ವಿಶ್ವಕಪ್ ನಲ್ಲಿ ಭಾರತ ತಂಡ ಅತ್ಯಂತ ಬಲಿಷ್ಠ ಸ್ಥಿತಿಯಲ್ಲಿದೆ. ಟೀಮ್ ಇಂಡಿಯಾ 10 ಪಂದ್ಯಗಳನ್ನು ಆಡಿದ್ದು ಎಲ್ಲ ಪಂದ್ಯದಲ್ಲಿ ಜಯ ಸಾಧಿಸಿದೆ. ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧವೂ ಅವರ ದಾಖಲೆ ಉತ್ತಮವಾಗಿದೆ. ಶಮಿ ಜೊತೆಗೆ ರವೀಂದ್ರ ಜಡೇಜಾ ಕೂಡ ಸಾಕಷ್ಟು ವಿಕೆಟ್ ಕಬಳಿಸಿದ್ದಾರೆ.ಆಸ್ಟ್ರೇಲಿಯ ವಿರುದ್ಧ ಭಾರತೀಯ ಬೌಲರ್ ಗಳು ಸ್ಥಿರ ಪ್ರದರ್ಶನ ನೀಡುವಲ್ಲಿ ಸಫಲರಾಗಿದ್ದಾರೆ. ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಆಲ್ ರೌಂಡರ್ ರವೀಂದ್ರ ಜಡೇಜಾ ಕಾಣಿಸಿಕೊಳ್ಳುತ್ತಾರೆ. ಎರಡನೇ ಸ್ಥಾನದಲ್ಲಿ ಸ್ವಿಂಗ್ ಬೌಲರ್ ಮೊಹಮ್ಮದ್ ಶಮಿ ಇದ್ದಾರೆ. ಶಮಿ 24 ಪಂದ್ಯಗಳಲ್ಲಿ 38 ವಿಕೆಟ್ ಪಡೆದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





