Breaking News

ಫೈನಲ್ ಪಂದ್ಯದಲ್ಲಿ ಭಾರತ, ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಎಂದು ಪರಿಗಣಿಸಲಾಗಿದೆ…

ಐಸಿಸಿ ಏಕದಿನ ವಿಶ್ವಕಪ್ ಸರಣಿ ಕೊನೆಯ ಹಂತಕ್ಕೆ ಬಂದು ನಿಂತಿದೆ. ಭಾನುವಾರ ನಡೆಯಲಿರುವ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಫೈನಲ್ ಪಂದ್ಯದಲ್ಲಿ ಭಾರತ, ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಎಂದು ಪರಿಗಣಿಸಲಾಗಿದೆ. ಅಲ್ಲದೆ ಪ್ರಸಕ್ತ ಟೂರ್ನಿಯಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿ ಎಲ್ಲರ ಚಿತ್ತ ಕದ್ದಿದೆ. ಹಾಗಿದ್ದರೆ ಈವರೆಗಿನ ವಿಶ್ವಕಪ್ ಟೂರ್ನಿಯ ಫೈನಲ್ ನಲ್ಲಿ ಶತಕ ಬಾರಿಸಿದ ಆಟಗಾರರ ಪಟ್ಟಿಯ ದೊಡ್ಡದಿದೆ. ಆದರೆ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಯಾವುದೇ ಒಬ್ಬ ಆಟಗಾರ ಶತಕ ಬಾರಿಸದೆ ಇರುವುದು ಶತಕದ ಬರ ಅನುಭವಿಸುತ್ತಿದೆ.
ಟೀಮ್ ಇಂಡಿಯಾ ಪರ ಏಕದಿನ ವಿಶ್ವಕಪ್ ನಲ್ಲಿನಲ್ಲಿ ಗರಿಷ್ಠ ರನ್ ಸಾಧನೆ ಮಾಡಿದ ಆಟಗಾರ ಎಂಬ ಹೆಗ್ಗಳಿಕೆ ಟೀಮ್ ಇಂಡಿಯಾದ ಮಾಜಿ ಓಪನರ್ ಗೌತಮ್ ಗಂಭೀರ್ ಅವರಿಗೆ ಸಲ್ಲುತ್ತದೆ. 2011ರ ಏಕದಿನ ವಿಶ್ವಕಪ್‌ನಲ್ಲಿ ಗೌತಮ್ ಗಂಭೀರ್ ಫೈನಲ್ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಗಮನ ಸೆಳೆದಿದ್ದರು. ಈ ಪಂದ್ಯದಲ್ಲಿ ಗೌತಿ 97 ರನ್ ಗಳ ಬಿಗ್ ಇನಿಂಗ್ಸ್ ಕಟ್ಟಿ ತಂಡಕ್ಕೆ ನೆರವಾಗಿದ್ದರು. ಇವರನ್ನು ಹೊರತು ಪಡಿಸಿದರೆ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಜೇಯ 91 ರನ್ ಬಾರಿಸಿದ್ದರು.

ಒಟ್ಟಾರೆ ಏಕದಿನ ವಿಶ್ವಕಪ್ ನಲ್ಲಿ ಟೀಮ್ಇಂಡಿಯಾದಿಂದ ಇನ್ನು ಶತಕದ ಸಾಧನೆ ಮಾಡಿಲ್ಲ. ಆದರೆ ಬೇರೆ ದೇಶದ ಆಟಗಾರರು ವಿಶ್ವಕಪ್ ಫೈನಲ್ ನಲ್ಲಿ ಶತಕ ಬಾರಿಸಿ ಅಬ್ಬರಿಸಿದ್ದಾರೆ. ವಿಶ್ವಕಪ್ ಫೈನಲ್ ನಲ್ಲಿ ಮೊದಲ ಶತಕವು 1975ರಲ್ಲಿ ದಾಖಲಾಗಿತ್ತು. ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಆಟಗಾರ ಕ್ಲೈವ್ ಲೈಡ್ ಭರ್ಜರಿ ಪ್ರದರ್ಶನ ನೀಡುವ ಮೂಲಕ ಅಬ್ಬರಿಸಿದ್ದರು. ಆಸ್ಟ್ರೇಲಿಯಾ ವಿರುದ್ಧದ ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ಕ್ಲೈವ್ 102ರನ್ ಬಾರಿಸಿದ್ದರು.

Share News

About BigTv News

Check Also

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ 6 ವಿಕೆಟ್‌ಗಳ ಭರ್ಜರಿ ಗೆಲುವು…..

ಗುರುವಾರ ಮೊಹಾಲಿಯಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.ಗುರುವಾರ …

Leave a Reply

Your email address will not be published. Required fields are marked *

You cannot copy content of this page