Breaking News

ರೈತರೊಬ್ಬರು ಬಿಗ್ ಬಾಸ್ ಮನೆಗೆ ಹೋಗುವ ಆಸೆಯಿಂದ ಎತ್ತಿನ ಗಾಡಿಯಲ್ಲಿ ಬೆಂಗಳೂರಿಗೆ ಬಂದಿದ್ದಾರೆ…..

ಬಿಗ್ ಬಾಸ್‌ ಮನೆಗೆ ಬರಬೇಕು ಎಂಬುದು ಹಲವು ಜನರ ಕನಸು. ಈ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುಬೇಕು ಎಂಬ ಆಸೆ ಹಲವರಿಗಿರುತ್ತದೆ. ಸೆಲಬ್ರಿಟಿಗಳು, ನಟ ನಟಿಯರ ಜೊತೆಗೆ ಜನ ಸಾಮಾನ್ಯರಿಗೂ ಅವಕಾಶ ಕೊಡಬೇಕು ಎಂಬ ಬೇಡಿಕೆ ಬರುತ್ತಿತ್ತು. ಕೆಲವು ಶೋಗಳಲ್ಲಿ ಬೆರಳೆಣಿಕೆಯಷ್ಟು ಜನರಿಗೆ ಅವಕಾಶ ನೀಡಲಾಗಿತ್ತು. ಆದರೂ ಅನೇಕರು ಈ ಶೋನಲ್ಲಿ ಸಾಮಾನ್ಯರಿಗೆ ಅವಕಾಶ ಸಿಗುತ್ತಿಲ್ಲ ಎಂಬ ಆರೋಪ ಮಾಡಿದ್ದರು.

ಬಿಗ್ ಬಾಸ್ ಮನೆಗೆ ಹೋಗಲು ಜನ ಫೇಮಸ್ ಆಗಿರಬೇಕು. ಇದಕ್ಕಾಗಿ ಹಲವು ಮಂದಿ ಸಕತ್ ಸರ್ಕಸ್ ಕೂಡ ಮಾಡುತ್ತಾರೆ. ಈಗ ರೈತರೊಬ್ಬರು ಬಿಗ್ ಬಾಸ್ ಮನೆಗೆ ಹೋಗುವ ಆಸೆಯಿಂದ ಎತ್ತಿನ ಗಾಡಿಯಲ್ಲಿ ಬೆಂಗಳೂರಿಗೆ ಬಂದಿದ್ದಾರೆ. ಅದು ನಟ ಕಿಚ್ಚ ಸುದೀಪ್ ಅವರ ನಿವಾಸದ ಎದುರಿನಲ್ಲಿ ಹೈಡ್ರಾಮಾ ಮಾಡಿದ್ದಾರೆ. ಟಿ ನರಸೀಪುರದ ರೈತ ಮಂಜು ಎಂಬುವವರು ಬೆಂಗಳೂರಿಗೆ ಎತ್ತಿನ ಗಾಡಿಯಲ್ಲಿ ಬಂದು ಗಮನ ಸೆಳೆದಿದ್ದಾರೆ. ಬಿಗ್ ಬಾಸ್ ಮನೆಗೆ ಹೋಗಲು ಅವಕಾಶ ನೀಡಬೇಕು ಎಂದು ನಟ ಸುದೀಪ್ ಮನೆ ಬಳಿ ಬಂದಿದ್ದಾರೆ. ಈಗಾಗಲೇ ಬಿಗ್ ಬಾಸ್‌ನಲ್ಲಿ ರೈತ ವರ್ತೀರ್ ಸಂತೋಷ್ ಇದ್ದಾರೆ. ಹಳ್ಳಿಕಾರ್ ತಳಿಯನ್ನು ಉಳಿಸಿ ಬೆಳೆಸಬೇಕು ಎಂಬ ಕನಸು ಅವರದ್ದು.

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *