ಬಳ್ಳಾರಿ: ಕೃಷಿಯಲ್ಲಿ ಡ್ರೋನ್ ತಂತ್ರಜ್ಞಾನ ಬಳಕೆ ಕುರಿತು ಚರ್ಚೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿಯೇ ಬಳ್ಳಾರಿಯಲ್ಲಿ ನಡೆದ ಕೃಷಿ ಡ್ರೋನ್ ತಂತ್ರಜ್ಞಾನ ಪ್ರದರ್ಶನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ನೂರಾರು ರೈತರು ಪ್ರದರ್ಶನದಲ್ಲಿ ಪಾಲ್ಗೊಂಡರು.ಸಿರುಗುಪ್ಪ ರಸ್ತೆಯ ಲಕ್ಷ್ಮೀನಗರ ಕ್ಯಾಂಪ್ ಹತ್ತಿರದ ಐಸಿಎಆರ್ ಭಾರತೀಯ ಮಣ್ಣು ಮತ್ತು ಜಲ ಸಂರಕ್ಷಣಾ ಸಂಸ್ಥೆಯ ಸಂಶೋಧನಾ ಕೇಂದ್ರದಲ್ಲಿ ರಾಷ್ಟ್ರೀಯ ಕೃಷಿ-ಡ್ರೋನ್ ಯೋಜನೆಯಡಿ ಐಸಿಅಆರ್- ಕೃಷಿ ತಂತ್ರಜ್ಞಾನ ಅಪ್ಲಿಕೇಶನ್ ಸಂಶೋಧನಾ ಸಂಸ್ಥೆ ಲೂಧಿಯಾ ಇವರ ವತಿಯಿಂದ ಈ ಪ್ರದರ್ಶನ ಆಯೋಜನೆ ಮಾಡಲಾಗಿತ್ತು. ಸಂಶೋಧನಾ ಫಾರ್ಮ್‍ನ ಆವರಣದಲ್ಲಿ ನವೆಂಬರ್ 16ರಿಂದ ಮೂರು ದಿನಗಳ ಕಾಲ ಹಮ್ಮಿಕೊಂಡಿದ್ದ ಕೃಷಿ ಡ್ರೋನ್ ತಂತ್ರಜ್ಞಾನ ಪ್ರದರ್ಶನ ಕಾರ್ಯಕ್ರಮಕ್ಕೆ ಮಣ್ಣು ಮತ್ತು ಜಲ ಸಂರಕ್ಷಣೆಯ ಪ್ರಧಾನ ವಿಜ್ಞಾನಿ ಡಾ. ಬಿ. ಎಸ್. ನಾಯ್ಕ್ ಚಾಲನೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





