ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ. ಕೊನೆಹಂತದ ಚಿತ್ರೀಕರಣ ಮಂಡ್ಯದಲ್ಲಿ ನಡೀತಿದೆ. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು ಹಾಡೊಂದರ ಚಿತ್ರೀಕರಣ ಮಾತ್ರ ಬಾಕಿಯಿದೆ ಎನ್ನಲಾಗ್ತಿದೆ. ಮುಂದಿನ ವರ್ಷ ಸಿನಿಮಾ ತೆರೆಗೆ ಬರಲಿದೆ. ಅಭಿಮಾನಿಗಳು ತೆರೆಮೇಲೆ ‘ಕಾಟೇರ’ನ ದರ್ಶನಕ್ಕಾಗಿ ಕಾದು ಕೂತಿದ್ದಾರೆ.
ಮಂಡ್ಯದಲ್ಲಿ ‘ಕಾಟೇರ’ ಚಿತ್ರದ ಕೊನೆಯ ಹಾಡಿನ ಚಿತ್ರೀಕರಣ ಈ ವಾರ ಆರಂಭವಾಗಿದೆ ಎನ್ನುವ ಮಾತುಗಳು ಕೇಳಿಬರ್ತಿದೆ. ಭಾರೀ ಸೆಟ್ ನಿರ್ಮಿಸಿ 4 ದಿನಗಳ ಕಾಲ ಸೆರೆಹಿಡಿಯಲಾಗುತ್ತಿದೆ. ದರ್ಶನ್ ಶೂಟಿಂಗ್ ಸೆಟ್‌ಗೆ ಹೋಗುವ ಮುನ್ನ ಶ್ರೀ ಕ್ಷೇತ್ರ ಆರತಿ ಉಕ್ಕಡ ಮಾರಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಅದಕ್ಕೆ ಸಂಬಂಧಿಸಿದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





