ಪ್ರಧಾನಮಂತ್ರಿ ನರೇಂದ್ರ ಮೋದಿ ನವೆಂಬರ್ 15 ರ ಬುಧವಾರದಂದು ಸುಮಾರು 8.5 ಕೋಟಿ ಅರ್ಹ ರೈತರಿಗೆ 18,000 ಕೋಟಿ ರೂಪಾಯಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15 ನೇ ಕಂತನ್ನು ಬಿಡುಗಡೆ ಮಾಡಿದರು. ಈಗ ಪಿಎಂ ಕಿಸಾನ್ ಫಲಾನುಭವಿಗಳಿಗೆ ಕಂತಿನ ಮೊತ್ತವನ್ನು ಹೆಚ್ಚಿಸುವ ಘೋಷಣೆಯನ್ನು ಮಾಡಿದ್ದಾರೆ.
ಪಿಎಂ ಕಿಸಾನ್ ಯೋಜನೆಯಡಿಯಲ್ಲಿ, ಅರ್ಹ ರೈತರು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂಪಾಯಿಗಳನ್ನು ಪಡೆಯಬಹುದಾಗಿದೆ. ಅಂದರೆ ವಾರ್ಷಿಕವಾಗಿ ಒಟ್ಟಾಗಿ 6,000 ರೂಪಾಯಿ ಹಣವನ್ನು ಪ್ರತಿ ವರ್ಷ ಮೂರು ಕಂತುಗಳಲ್ಲಿ ನೀಡಲಾಗುತ್ತದೆ. ಆದರೆ ಈ ಮೊತ್ತವನ್ನು 12 ಸಾವಿರ ರೂಪಾಯಿಗೆ ಏರಿಸಲಾಗುತ್ತದೆ. ಆದರೆ ಈ ಒಂದು ರಾಜ್ಯದ ರೈತರಿಗೆ ಮಾತ್ರ ಇದು ಅನ್ವಯವಾಗುತ್ತದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





