ಬಳ್ಳಾರಿ: ”ಜಿಲ್ಲೆಯಲ್ಲಿ ಈಗಾಗಲೇ ಬೆಳೆ ಸಮೀಕ್ಷೆ ಮುಗಿದಿದೆ. ಆದರೆ ಶೇ.33 ರಷ್ಟು ರೈತರ ಒಟ್ಟು ಜಮೀನಿನ ವಿಸ್ತೀರ್ಣದ ಮಾಹಿತಿ ನಿಖರವಾಗಿ ನಮೂದಿಸಲಾಗಿಲ್ಲ. ಅಧಿಕಾರಿಗಳ ಇಂತಹ ನಡೆಯಿಂದ ರೈತರಿಗೆ ಅನ್ಯಾಯವಾಗಲಿದೆ” ಎಂದು ಅಧಿಕಾರಿಗಳನ್ನು ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಸಿದ್ದಾರೆ.ಬಳ್ಳಾರಿ ಜಿಲ್ಲಾಡಳಿತದ ಸಭಾಂಗಣದಲ್ಲಿ ಮಂಗಳವಾರ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, “ಬರ ಪರಿಹಾರದ ಹಣ ರೈತರಿಗೆ ಆನ್ಲೈನ್ ಮೂಲಕವೇ ತಲುಪಲಿದೆ. ‘ಫ್ರೂಟ್ಸ್’ ತಂತ್ರಾಂಶದಲ್ಲಿ ರೈತರ ಸಂಪೂರ್ಣ ಜಮೀನಿನ ಒಟ್ಟು ವಿಸ್ತೀರ್ಣ ನಮೂದಿಸಿದರೆ ಮಾತ್ರ ಅವರಿಗೆ ನ್ಯಾಯಯುತ ಪರಿಹಾರ ತಲುಪಲಿದೆ. ಆದರೆಬಳ್ಳಾರಿಯಲ್ಲಿ ಬೆಳೆ ಸಮೀಕ್ಷೆ ನಡೆದಿದ್ದರು ಶೇ.33 ರಷ್ಟು ರೈತರ ಜಮೀನಿನ ಒಟ್ಟು ವಿಸ್ತೀರ್ಣದ ಮಾಹಿತಿ ಫ್ರೂಟ್ಸ್ ತಂತ್ರಾಂಶದಲ್ಲಿ ಸಂಪೂರ್ಣವಾಗಿ ನಮೂದಿಸಲಾಗಿಲ್ಲ ಏಕೆ ? ಸರ್ಕಾರದ ಸೂಚನೆ ಪಾಲಿಸಲೂ ನಿಮಗೆ ಕಷ್ಟವೇ?” ಎಂದು ಅಧಿಕಾರಿಗಳ ವಿರುದ್ಧ ಅವರು ಆಕ್ರೋಶ ಹೊರಹಾಕಿದರು. ಗ್ರಾಮ ಆಡಳಿತ ಅಧಿಕಾರಿಗೆ ಆತನ ಅಧಿಕಾರದ ವ್ಯಾಪ್ತಿಯಲ್ಲಿ ಯಾವ ರೈತನಿಗೆ ಎಲ್ಲಿ.. ಎಷ್ಟು ಏಕರೆ ಜಮೀನಿದೆ? ಎಂಬ ಕನಿಷ್ಟ ಮಾಹಿತಿ ಇದ್ದೇ ಇರುತ್ತದೆ. ಅದನ್ನು ಮತ್ತೆ ರೈತನಲ್ಲಿ ಕೇಳಿ ತಂತ್ರಾಂಶದಲ್ಲಿ ನಮೂದಿಸಿ” ಎಂದು ಸೂಚಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





