Breaking News

ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ ನವೆಂಬರ್‌ 22 ರಿಂದ ಸ್ಥಗಿತಗೊಳ್ಳಲಿದೆ…

ದಾವಣಗೆರೆ: ಭದ್ರಾ ಜಲಾಶಯದಿಂದ ಮುಂಗಾರು ಬೆಳೆಗಳಿಗೆ ಬಲದಂಡೆ ಮತ್ತು ಎಡದಂಡೆ ಕಾಲುಗಳಲ್ಲಿ ಸೆಪ್ಟೆಂಬರ್‌ 6ರಿಂದ ನೀರು ಹರಿಸಲಾಗುತ್ತಿದ್ದು, ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ ನವೆಂಬರ್‌ 22 ರಿಂದ ಸ್ಥಗಿತಗೊಳ್ಳಲಿದೆ. ಆದ್ದರಿಂದ ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ರೈತರು ಮತ್ತು ಸಂಬಂಧಪಟ್ಟವರು ಸಹಕರಿಸುವಂತೆ ಕರ್ನಾಟಕ ನೀರಾವರಿ ನಿಗಮದ ಭದ್ರಾ ಯೋಜನಾ ವೃತ್ತ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ಶೇಕಡ 70ರಷ್ಟು ಭದ್ರಾ ಅಚ್ಚುಕಟ್ಟು ಪ್ರದೇಶವಿದ್ದು, ರೈತರು ಸುಮಾರು 1.4 ಲಕ್ಷ ಎಕರೆಯಲ್ಲಿ ಭತ್ತದ ಬೆಳೆ ಬೆಳೆಸಿದ್ದಾರೆ. ನಿತ್ಯ ನೀರು ಬೇಡುವ ಭತ್ತದ ಬೆಳೆ ಉಳಿಸಿಕೊಳ್ಳಲು ರೈತರು ಎಲ್ಲಾ ನಮೂನೆಗಳ ಹೋರಾಟ ಮಾಡಿದ್ದರೂ ಸಹ ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರ ಕೂಗಿಗೆ ಕ್ಯಾರೆ ಎನ್ನದೆ ಮತ್ತೆ ನೀರು ನಿಲುಗಡೆಗೆ ಮುಂದಾಗಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಕಳೆದ ಕೆಲ ದಿನಗಳ ಹಿಂದೆಯಷ್ಟೇ ಹರಿಹರ ಶಾಸಕ ಬಿ.ಪಿ.ಹರೀಶ್ ಅವರು ಕೆಪಿಸಿಸಿ ಅಧ್ಯಕ್ಷ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ನೂರು ದಿನಗಳ ಕಾಲ ನೀರು ಹರಿಸಲು ನಿರ್ಧರಿಸಲಾಗಿತ್ತು. ಮಳೆ ಬಂದ ಕಾರಣ ಮತ್ತೆ ನೀರು ಸ್ಥಗಿತಗೊಳಿಸಲಾಗಿತ್ತು. ಇನ್ನು ಹತ್ತು ದಿನಗಳ ಕಾಲ ಹೆಚ್ಚು ಅವಧಿ ನೀರು ಹರಿಸಬೇಕು ಎಂಬ ಮನವಿ ಮಾಡಿದ್ದರು. ಇದಕ್ಕೂ ಯಾವುದೇ ಸ್ಪಂದನೆ ದೊರೆತಿಲ್ಲ.

Share News

About BigTv News

Check Also

ಪಿಎಸ್‌ಐ-ಪಿಸಿ ಮೇಲೆ ಲೋಕಾಯುಕ್ತ ದಾಳಿ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ!

ಭ್ರಷ್ಟಾಚಾರಕ್ಕೆ ಬಿಗಿ ಹೊಡೆತ: ಪಿಎಸ್‌ಐ, ಪಿಸಿ ಬಂಧನಕ್ಕೆ ಠಾಣೆ ಮುಂದೆ ಪಟಾಕಿ ಹಬ್ಬ! ಲೋಕಾಯುಕ್ತ ದಾಳಿ ನಂತರ ಜನರ ಸಂಭ್ರಮ: …

Leave a Reply

Your email address will not be published. Required fields are marked *