Breaking News

ಹಾಸನದ ತಹಶೀಲ್ದಾರ್ ವರ್ಗಾವಣೆಗೆ ಕರ್ನಾಟಕದ ಆಡಳಿತಾತ್ಮಕ ನ್ಯಾಯ ಮಂಡಳಿ (ಕೆಎಟಿ) ತಡೆ ನೀಡುವ ಮೂಲಕ ಸರ್ಕಾರಕ್ಕೆ ಹಿನ್ನಡೆಯಾಗಿದೆ….

ಹಾಸನ: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವರ್ಗಾವಣೆಯೊಂದು ಮತ್ತೊಮ್ಮೆ ಸುದ್ದಿಯಾಗಿದೆ. ಅದರಲ್ಲೂ ಜೆಡಿಎಸ್ ಭದ್ರಕೋಟೆ ಹಾಸನದ ತಹಶೀಲ್ದಾರ್ ವರ್ಗಾವಣೆಗೆ ಕರ್ನಾಟಕದ ಆಡಳಿತಾತ್ಮಕ ನ್ಯಾಯ ಮಂಡಳಿ (ಕೆಎಟಿ) ತಡೆ ನೀಡುವ ಮೂಲಕ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಕರ್ನಾಟಕ ಸರ್ಕಾರ ಕೆಲವು ದಿನಗಳ ಹಿಂದೆ ಹಾಸನ ತಹಶೀಲ್ದಾರ್ ಶ್ವೇತಾ ಸೇರಿದಂತೆ 13 ತಹಶೀಲ್ದಾರ್‌ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಶ್ವೇತಾ ಕೆಎಟಿಯಲ್ಲಿ ಪ್ರಶ್ನೆ ಮಾಡಿದ್ದರು. ಶ್ವೇತಾ ಅವರು ಗ್ರೇಡ್-1 ತಹಶೀಲ್ದಾರ್ ಆಗಿದ್ದರು. ಆದರೆ ಅವರ ಸ್ಥಾನಕ್ಕೆ ಗ್ರೇಡ್-2 ತಹಶೀಲ್ದಾರ್ ನೇಮಕ ಮಾಡಲಾಗಿತ್ತು.ತಡೆ ನೀಡಿದ್ದು ಏಕೆ?; ಹಾಸನ ತಹಶೀಲ್ದಾರ್ ಆಗಿ ಶ್ವೇತಾ ಅಧಿಕಾರವಹಿಸಿಕೊಂಡು ಕೇವಲ 8 ತಿಂಗಳು ಕಳೆದಿದೆ. ಒಂದು ವರ್ಷ ಪೂರ್ಣಗೊಳ್ಳುವ ಮೊದಲೇ ವರ್ಗಾವಣೆ ಮಾಡಲಾಗಿದೆ. ಅಲ್ಲದೇ ಅವರನ್ನು ವರ್ಗಾವಣೆ ಮಾಡಿದ ಜಾಗಕ್ಕೆ ಗ್ರೇಡ್-2 ತಹಶೀಲ್ದಾರ್ ನೇಮಕ ಮಾಡಿರುವುದನ್ನು ಕೆಎಟಿಯಲ್ಲಿ ಪ್ರಶ್ನೆ ಮಾಡಲಾಗಿತ್ತು.

Share News

About BigTv News

Check Also

ಕಾನೂನು ರಕ್ಷಕನೇ ಭಕ್ಷಕ..! ಪೋಕ್ಸೊ ಪ್ರಕರಣದಲ್ಲಿ ಪಿಎಸ್‌ಐ ಬಂಧನ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಬಂಧನ, ಭಟ್ಕಳ: ಸಾರ್ವಜನಿಕರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಅಧಿಕಾರಿಯೊಬ್ಬನೇ …

Leave a Reply

Your email address will not be published. Required fields are marked *