Breaking News

ಸಿದ್ದರಾಮಯ್ಯ ಅವರ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ದಿಢೀರ್‌ ಭೇಟಿ…

ಬೆಂಗಳೂರು: ಲೋಕಸಭಾ ಚುನಾವಣೆಯ ಹೊತ್ತಲಿ ಕಾಂಗ್ರೆಸ್‌ ಪಾಳಯದಲ್ಲಿನ ಅಸಮಾಧಾನವನ್ನ ಶಮನಗೊಳಿಸಲು ಕಾಂಗ್ರೆಸ್‌ ಹೈಕಮಾಂಡ್‌ ಗೆ ಮುಂದಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ದಿಢೀರ್‌ ಭೇಟಿ ನೀಡಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ.ಈ ಕುರಿತು ಸಿದ್ದರಾಮಯ್ಯ ಅವರ ಜೊತೆಗೆ ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕದ ಕುರಿತು ಡಿ ಕೆ ಶಿವಕುಮಾರ್‌ ಚರ್ಚೆ ನಡೆಸಿದ್ದು, ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿ ಕೆ ಶಿವಕುಮಾರ್‌, ನಿಗಮ ಮಂಡಳಿ ನೇಮಕ ವಿಚಾರವಾಗಿ ಚರ್ಚೆ ಮಾಡುತ್ತಿದ್ದೇವೆ. ಹಿರಿಯ ನಾಯಕರು, ಶಾಸಕರ ಅಭಿಪ್ರಾಯವನ್ನು ಪಡೆಯುತ್ತಿದ್ದೇವೆ. ನಾನು ಹಾಗೂ ಮುಖ್ಯಮಂತ್ರಿಗಳು ತೆಲಂಗಾಣ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಹೋಗಬೇಕಿದೆ. 28ರಂದು ನಮ್ಮ ದೆಹಲಿ ನಾಯಕರು ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಆ ಸಭೆ ಬಳಿಕ ನಮ್ಮ ಪಟ್ಟಿಯನ್ನು ಹೈಕಮಾಂಡ್ ನಾಯಕರಿಗೆ ಕಳುಹಿಸುತ್ತೇವೆ ಎಂದರು.

ಗೃಹಸಚಿವರು ನಿಗಮ ಮಂಡಳಿ ನೇಮಕ ವಿಚಾರದಲ್ಲಿ ಅಸಮಾಧಾನ ಹೊಂದಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಗೃಹಮಂತ್ರಿಗಳು ಮೂರು ದಿನಗಳ ಕಾಲ ಪ್ರವಾಸದಲ್ಲಿದ್ದರು, ಅವರಿಗೆ ಅವರದೇ ಆದ ಕೆಲಸಗಳಿರುತ್ತವೆ. ಸುಮ್ಮನೆ ಯಾರೋ ಹೇಳಿದ್ದನ್ನು ನೀವು (ಮಾಧ್ಯಮಗಳು) ದೊಡ್ಡದಾಗಿ ಬಿಂಬಿಸುತ್ತೀರಿ. ಅವರು ಯಾವ ಕಾರಣಕ್ಕೆ ಅಸಮಾಧಾನಗೊಳ್ಳುತ್ತಾರೆ? ಅಸಮಾಧಾನ ಆಗುವಂತಹದ್ದು ಏನಾಗಿದೆ? ಈ ರೀತಿ ಅಸಮಾಧಾನ ಸೃಷ್ಟಿಸಿ ನಿಮ್ಮ ಘನತೆ ಯಾಕೆ ಹಾಳುಮಾಡಿಕೊಳ್ಳುತ್ತೀರಿ ಎಂದರು.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *