Breaking News

ಈ ವರ್ಷ 18,250 ರೈತರು ಫಸಲ್ ಭೀಮಾ ಯೋಜನೆಗೆ ನೊಂದಾಯಿಸಿದ್ದಾರೆ….

ದಾವಣಗೆರೆ: ಜಗಳೂರು ತಾಲ್ಲೂಕಿನಲ್ಲಿ 409 ಮೀ.ಮೀ ವಾಡಿಕೆಗೆ 361 ಮೀ.ಮೀ ಮಳೆಯಾಗಿದೆ. ಜುಲೈ ತಿಂಗಳಲ್ಲಿ ಮಾತ್ರ ಹೆಚ್ಚು ಮಳೆಯಾಗಿದ್ದು, ಆಗಸ್ಟ್, ಸೆಪ್ಟೆಂಬರ್‌ನಲ್ಲಿ ಮಳೆ ತೀವ್ರ ಕೊರತೆಯಿಂದ ಶೇಕಡಾ 80ರಷ್ಟು ಬೆಳೆ ನಷ್ಟವಾಗಿದೆ. ಈ ವರ್ಷ 18,250 ರೈತರು ಫಸಲ್ ಭೀಮಾ ಯೋಜನೆಗೆ ನೊಂದಾಯಿಸಿದ್ದಾರೆ ಎಂದು ಕೃಷಿ ಅಧಿಕಾರಿಗಳು ಮಾಹಿತಿ ನೀಡಿದರು. ಇನ್ನು ತಾಲೂಕಿನ 48 ಗ್ರಾಮಗಳು ಪ್ಲೋರೈಡ್‌ನಿಂದ ಕೂಡಿದ್ದು, ಈ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಲಾಗುವುದು ಎಂದು ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಭರವಸೆ ನೀಡಿದರು.

ಈ ವೇಳೆ ಮಾತನಾಡಿದ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು, ಕೂಡಲೇ ಕೇಂದ್ರ ಸರ್ಕಾರವು 38 ಕೋಟಿ ರೂಪಾಯಿ ಬೆಳೆ ಪರಿಹಾರ ಬಿಡುಗಡೆ ಮಾಡಬೇಕಾಗಿದೆ. ಬೆಳೆವಿಮೆ ಮಾಡಿಸಿದ ರೈತರಿಗೆ ವಿಮಾ ಪರಿಹಾರ ಸಿಗುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.ದಾವಣಗೆರೆ ಜಿಲ್ಲೆಯನ್ನು ಈಗಾಗಲೇ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲಾಗಿದೆ. ಕೇಂದ್ರದ ಕೇಂದ್ರ ಬರ ಅಧ್ಯಯನ ತಂಡ ಜಿಲ್ಲೆಗೆ ಬಂದಾಗ ಎನ್‍ಡಿಆರ್‌ಎಫ್ ಮಾರ್ಗಸೂಚಿನ್ವಯ 259 ಕೋಟಿ ರೂಪಾಯಿ ಬೆಳೆ ನಷ್ಟದ ವರದಿಯನ್ನು ನೀಡಲಾಗಿದೆ. ಜಗಳೂರು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಉಪಸ್ಥಿತಿಯಲ್ಲಿ ನಡೆದ ತಾಲ್ಲೂಕಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ನೀಡಿರುವ ಮಾಹಿತಿ.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *