Breaking News

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ತಾವು ಕೂಡ ಆಕಾಂಕ್ಷಿ ಎಂದು ಹೇಳಿಕೊಂಡಿದ್ದಾರೆ…

ಕಾರವಾರ: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಉಳಿದಿದೆ. ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಯಾಗಿದ್ದು, ಹಂಚಿಕೆಯಾಗುವ ಟಿಕೆಟ್‌ಗಾಗಿ ಬಾರಿ ಪೈಪೋಟಿ ಕೂಡ ಶುರುವಾಗಿದೆ. ಆದರೆ ಉತ್ತರ ಕನ್ನಡದಲ್ಲಿ ಅಸ್ತಿತ್ವಕ್ಕೂ ಪರದಾಡುತ್ತಿರುವ ಜೆಡಿಎಸ್ ಪಕ್ಷದ ಮೂಲಕ ಮೈತ್ರಿ ಟಿಕೆಟ್ ಗಿಟ್ಟಿಸಿಕ್ಕೊಳ್ಳಲು ಪಕ್ಷದ ನಾಯಕರುಗಳಲ್ಲಿ ಭಾರೀ ಪೈಪೋಟಿ ಶುರುವಾಗಿದೆ.ರಾಜ್ಯದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾದಂತೆ ಉತ್ತರಕನ್ನಡದಲ್ಲಿಯೂ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಹೆಚ್ಚಾಗಿ ಕಾಣಿಸಿಕ್ಕೊಳ್ಳುವ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಇದೀಗ ತಾವು ಜೆಡಿಎಸ್‌ನಲ್ಲಿಯೇ ಮುಂದುವರಿಯ್ಯುತ್ತಿರುವುದಾಗಿ ಹೇಳಿ ಮುಂದೆಬಂದಿದ್ದಾರೆ.ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ವಿರುದ್ಧ, ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದರು. ಆದರೆ ಇದೀಗ ತಾವು ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ತಾವು ಕೂಡ ಆಕಾಂಕ್ಷಿ ಎಂದು ಹೇಳಿಕೊಂಡಿದ್ದಾರೆ.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *