2023ರ ಐಸಿಸಿ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಎಡವಿದ ಟೀಮ್ ಇಂಡಿಯಾ ನಿರಾಸೆ ಅನುಭವಿಸಿದೆ. ಈ ವಿಶ್ವಕಪ್‌ನ ಸ್ಟಾರ್ ಆಟಗಾರ ಹಾಗೂ ಸಾರ್ವಕಾಲಿಕ ಶ್ರೇಷ್ಠ ವಿರಾಟ್ ಕೊಹ್ಲಿ ಪಾಲಿಗೆ ಕೊನೆಯ ವಿಶ್ವಕಪ್ ಎಂದು ಹೇಳಲಾಗುತ್ತಿದೆ. ಈ ವೇಳೆ ವಿರಾಟ್ ಕೊಹ್ಲಿ ತಮ್ಮ ಕೊನೆಯ ಪ್ರಯತ್ನದಲ್ಲಿ ವಿಶ್ವಕಪ್ ಗೆಲ್ಲದೇ ಇರುವ ನೋವನ್ನು ಹೊಂದಿದ್ದಾರೆ. ಇದೀಗ ವಿಶ್ವಕಪ್ ಇತಿಹಾಸದ ಪುಟ ಸೇರಿದೆ. ಚೇಸಿಂಗ್ ಸ್ಟಾರ್ ಪ್ರಸಕ್ತ ವಿಶ್ವಕಪ್‌ನಲ್ಲಿ ಸರಣಿ ಶ್ರೇಷ್ಠ ಆಟಗಾರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈಗ ಎಲ್ಲರ ಮುಂದಿರುವ ಪ್ರಶ್ನೆ ವಿರಾಟ್ ಕೊಹ್ಲಿ ಇನ್ನೂ ಎಷ್ಟು ವರ್ಷ ಕ್ರಿಕೆಟ್ ಅಂಗಳದಲ್ಲಿ ಕಾಣಿಸಿಕೊಳ್ಳುತ್ತಾರೆ ಎಂಬುದು. ವಿರಾಟ್ ಕೊಹ್ಲಿ ಅವರ ವೃತ್ತಿಜೀವನ ಮತ್ತು ವೈಯಕ್ತಿಕ ಜೀವನದ ಬಗ್ಗೆ 2016ರಲ್ಲಿ ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದರು. ಅವರ ಭವಿಷ್ಯವನ್ನು ತಾಳೆ ಹಾಕಿ ನೋಡಿದಾಗ ಎಲ್ಲವೂ ಅವರು ಹೇಳಿದಂತೆ ಆಗುತ್ತಿದೆ ಎಂಬುದು ತಿಳಿಯುತ್ತಿದೆ. 2017 ಮತ್ತು 2018ರಲ್ಲಿ ಅವರು ನಾಯಕರಾಗಿದ್ದರು ಮತ್ತು ಆಗ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದರು
bigtvnews | Hubli Dharwad News | Kannada News | Karnataka News Hubli News | News In Hubli | Local news





