Breaking News

ನಳಿನ್ ಕುಮಾರ್ ಕಟೀಲ್ ಅವರನ್ನು ಗೆಲ್ಲಿಸುವ ಕೆಲಸ ಮಾಡಬೇಕಿದೆ: ಬಿ.ವೈ ವಿಜಯೇಂದ್ರ.

ಮಂಗಳೂರು: ಮುಂದಿನ ಲೋಕಸಭಾ ಚುನಾವಣೆಯನ್ನ ನಾವು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ. ಮತ್ತೊಮ್ಮೆ ನಮ್ಮ‌ ಪಕ್ಷದ ಅಭ್ಯರ್ಥಿಯಾದ ನಳಿನ್ ಕುಮಾರ್ ಕಟೀಲ್ ಅವರನ್ನು ಗೆಲ್ಲಿಸುವ ಕೆಲಸ ಮಾಡಬೇಕಿದೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.ಮಂಗಳೂರು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪರಶುರಾಮ ಸೃಷ್ಟಿಯ ನಾಡು, ಕಂಬಳದ ಬೀಡು ಮಂಗಳೂರಿನ ಜನರಿಗೆ ನಮಸ್ಕಾರಗಳು. ನನಗೆ ಯಡಿಯೂರಪ್ಪ ಮಗ ಅಂತ ಜವಾಬ್ದಾರಿ ಕೊಟ್ಟಿಲ್ಲ. ಹೈಕಮಾಂಡ್ ಕೆಲಸ ಗುರುತಿಸಿ ಈ ಜವಾಬ್ದಾರಿ ಕೊಟ್ಟಿದೆ. ಯಡಿಯೂರಪ್ಪ, ಅನಂತ್ ಕುಮಾರ್ ಸೇರಿ ಹಲವು ನಾಯಕರ ಶ್ರಮದಿಂದ ರಾಜ್ಯದಲ್ಲಿ ಬಿಜೆಪಿ ಬೆಳೆದಿದೆ. ಆದರೆ‌ ಕಾಂಗ್ರೆಸ್ ಮೊನ್ನೆ ಚುನಾವಣೆ ವೇಳೆ ಒಂದು ಸುಳ್ಳನ್ನು ಹತ್ತಾರು ಬಾರಿ ಹೇಳಿ ಅಧಿಕಾರ ಪಡೆದಿದೆ ಎಂದರು.
ಅಧಿಕಾರಕ್ಕೆ ಬಂದ ಹೊಸ ಸರ್ಕಾರದ ಮೇಲೆ ಭಾರೀ ನಿರೀಕ್ಷೆ ಇತ್ತು. ಆದರೆ ಅಧಿಕಾರ ಸ್ವೀಕರಿಸಿದ ಮೊದಲ ದಿನದಿಂದಲೇ ನಿರೀಕ್ಷೆ ಹುಸಿಯಾಗಿದೆ. ಮೋದಿ ಕ್ರೀಡಾ ಮನೋಭಾವದಿಂದ ಮೊನ್ನೆ ಭಾರತದ ಪರ ಸ್ಟೇಡಿಯಂಗೆ ಬಂದಿದ್ದರು. ಆದರೆ ಪುಣ್ಯಾತ್ಮ ರಾಹುಲ್ ಗಾಂಧಿ ಅದು ಅಪಶಕುನ ಅಂತಾರೆ. ಆದರೆ ನಾವು ರಾಹು ಕಾಲದಲ್ಲಿ ಯಾವುದೇ ಶುಭ ಕಾರ್ಯ ಮಾಡಲ್ಲ. ಆದರೆ ಕಾಂಗ್ರೆಸ್ ಪಕ್ಷದ ನಾಯಕನ ಹೆಸರು ರಾಹುಲ್ ಗಾಂಧಿ. ರಾಹುಕಾಲ ಮತ್ತು ರಾಹುಲ್ ಗಾಂಧಿಗೆ ಯಾವುದೇ ವ್ಯತ್ಯಾಸ ಇಲ್ಲ. ರಾಹುಲ್ ಗಾಂಧಿ ಪಕ್ಷದ ಅಧಿಕಾರ ಪಡೆದ ಬಳಿಕ ಅವರಿಗೆ ರಾಹುಕಾಲ ಶುರುವಾಗಿದೆ ಎಂದು ವ್ಯಂಗ್ಯವಾಡಿದರು.

Share News

About BigTv News

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *