Breaking News

ಶ್ರೇಯಾಂಕ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೂರನೇ ಸ್ಥಾನಕ್ಕೆ ಏರಿಕೆ…

ಟೀಮ್ ಇಂಡಿಯಾದ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ ಈ ಬಾರಿಯ ವಿಶ್ವಕಪ್‌ನಲ್ಲಿ ದಾಖಲೆಯ ಪ್ರದರ್ಶನ ನೀಡಿ ಅಬ್ಬರಿಸಿದ್ದಾರೆ. ಟೀಮ್ ಇಂಡಿಯಾ ಫೈನಲ್ ಪಂದ್ಯದಲ್ಲಿ ಗೆಲ್ಲಲು ಸಾಧ್ಯವಾಗದಿದ್ದರೂ ಟೂರ್ನಿಯುದ್ದಕ್ಕೂ ಭಾರತೀಯ ಆಟಗಾರರ ಆಟ ನಿಜಕ್ಕೂ ಅಮೋಘ. ಆಟಗಾರರ ಈ ಪ್ರದರ್ಶನ ಐಸಿಸಿ ಶ್ರೇಯಾಂಕದ ಮೇಲೆ ನೇರ ಪರಿಣಾಮ ಬೀರಿದೆ. ಹೀಗಾಗಿ ಟೀಮ್ ಇಂಡಿಯಾದ ಆಟಗಾರರು ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಪ್ರಾಬಲ್ಯ ಸಾಧಿಸಿದ್ದಾರೆ.ಈಗಾಗಲೇ ಟೀಮ್ ಇಂಡಿಯಾದ ಯುವ ಆರಂಭಿಕ ಆಟಗಾರ ಶುಬ್ಮನ್ ಗಿಲ್ ನಂಬರ್ 1 ಸ್ಥಾನದಲ್ಲಿ ಇದ್ದು ನೂತನವಾಗಿ ಬಿಡುಗಡೆಯಾಗಿರುವ ಪಟ್ಟಿಯಲ್ಲಿಯೂ ಅವರು ಮೊದಲ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಈ ಮಧ್ಯೆ ವಿರಾಟ್ ಕೊಹ್ಲಿ ಮತ್ತೆ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನದತ್ತ ದಾಪುಗಾಲಿಟ್ಟಿದ್ದಾರೆ. ಅಗ್ರ ನಾಲ್ಕು ಬ್ಯಾಟರ್‌ಗಳ ಪೈಕಿ ಮೂವರು ಬಾರತೀಯ ಬ್ಯಾಟರ್‌ಗಳೇ ಸ್ಥಾನ ಪಡೆದುಕೊಂಡಿರುವುದು ಗಮನಾರ್ಹ ಅಂಶ.

ನೂತನವಾಗಿ ಬಿಡುಗಡೆಯಾಗಿರುವ ಶ್ರೇಯಾಂಕ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೂರನೇ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ. ವಿಶ್ವಕಪ್ ಟೂರ್ನಿಯ ಸೆಮಿಫೈನಲ್‌ನಲ್ಲಿ ಕೊಹ್ಲಿ ಶತಕ ಸಿಡಿಸಿದ್ದು ಫೈನಲ್‌ನಲ್ಲಿ ಅರ್ಧ ಶತಕ ಸಿಡಿಸದ್ದರು. ಈ ಮೂಲಕ ಭಾರೀ ಏರಿಕೆ ಕಂಡಿದ್ದಾರೆ. ಇದೀಗ ಟೀಮ್ ಇಂಡಿಯಾದ ಮಾಜಿ ನಾಯಕ ಮೊದಲ ಎರಡು ಸ್ಥಾನಗಳಲ್ಲಿರುವ ಶುಬ್ಮನ್ ಗಿಲ್ ಹಾಗೂ ಪಾಕಿಸ್ತಾನದ ಬಾಬರ್ ಅಜಂ ಸ್ಥಾನಕ್ಕೆ ಮತ್ತಷ್ಟು ಸನಿಹದಲ್ಲಿದ್ದಾರೆ. ಇನ್ನು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕುಡ ನಾಲ್ಕನೇ ಸ್ಥಾನಕ್ಕೇರಿದ್ದಾರೆ. ಕ್ವಿಂಟನ್ ಡಿಕಾಕ್ ಅವರನ್ನು ಹಿಂದಿಕ್ಕಿ ಟಾಪ್ 4ಗೆ ಲಗ್ಗೆಯಿಟ್ಟಿದ್ದಾರೆ ರೋಹಿತ್ ಶರ್ಮಾ.

Share News

About BigTv News

Check Also

IPL 2025 : ಮೊದಲ ಪಂದ್ಯದಲ್ಲಿ ಗೆದ್ದು ಬಿಗಿದ ಆರ್‌ಸಿಬಿ

ಐಪಿಎಲ್ 2025ರ ಭಾಗವಾಗಿ ಆರ್ ಸಿ ಬಿ ವಿರುದ್ಧ ಪಂದ್ಯದಲ್ಲಿ ಕೆಕೆಆರ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡು ನಿಗದಿತ 20 …

Leave a Reply

Your email address will not be published. Required fields are marked *