ಬಾಗಲಕೋಟೆ: ಎಲ್ಲಾ ಜಾತಿಯ ಬಡವರು ಮತ್ತು ಮಧ್ಯಮವರ್ಗದವರ ಸಂಕಷ್ಟಕ್ಕೆ ಸ್ಪಂದಿಸಲು ನಾವು ಗ್ಯಾರಂಟಿ ಯೋಜನೆಗಳ ಮೂಲಕ ಈ ವರ್ಷ 38 ಸಾವಿರ ಕೋಟಿ ರೂಪಾಯಿಯನ್ನು ಕನ್ನಡ ಜನತೆಯ ಜೇಬಿಗೆ ಹಾಕುವ ಕೆಲಸ ಮಾಡಿದ್ದೇವೆ. ಮುಂದಿನ ವರ್ಷ ಕನ್ನಡ ನಾಡಿನ ಜನತೆಯ ಜೇಬಿಗೆ 58 ಸಾವಿರ ಕೋಟಿ ರೂಪಾಯಿಯನ್ನು ಹಾಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬಾಗಲಕೋಟೆಯ ವೀಣಾ ವಿ ಕಾಶಪ್ಪನವರ್ ಫೌಂಡೇಶನ್ ಹಮ್ಮಿಕೊಂಡಿದ್ದ ಉಚಿತ ಕೆ.ಎ.ಎಸ್ ಮತ್ತು ಪಿ.ಎಸ್.ಐ ಪರೀಕ್ಷೆಯ ತರಬೇತಿ ಕೇಂದ್ರ ಮತ್ತು ಅಕಾಡೆಮಿಯನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ, ಬಡವರಿಗೆ ಜಾತಿ-ಧರ್ಮ ಎನ್ನುವುದು ಇಲ್ಲ. ಎಲ್ಲಾ ಜಾತಿ ಧರ್ಮದ ಬಡವರ, ಮಧ್ಯಮವರ್ಗದವರ ಸಂಕಟಗಳೂ ಒಂದೇ ಆಗಿವೆ. ಹೀಗಾಗಿ ಮುಂದಿನ ವರ್ಷ ಕನ್ನಡ ನಾಡಿನ ಜನತೆಯ ಜೇಬಿಗೆ 58 ಸಾವಿರ ಕೋಟಿ ರೂಪಾಯಿಯನ್ನು ಹಾಕುತ್ತೇವೆ. ವಿರೋಧಿಗಳ ಟೀಕೆಗೆ ಡೋಂಟ್ ಕೇರ್ ಎಂದು ತಿಳಿಸಿದರು.ಗ್ರಾಮೀಣ ಮಕ್ಕಳೂ KAS-PSI ಪರೀಕ್ಷೆಯಲ್ಲಿ ಪಾಸಾಗಲು ವೀಣಾ ಕಾಶಪ್ಪನವರ್ ಫೌಂಡೇಶನ್ ನೆರವಾಗಲಿದೆ. ಈಗ 200 ಅಭ್ಯರ್ಥಿಗಳಿಂದ ಆರಂಭವಾಗಿ 1500 ವಿದ್ಯಾರ್ಥಿಗಳಿಗೆ ಪ್ರತೀ ವರ್ಷ ವೀಣಾ ಕಾಶಪ್ಪನವರ್ ಫೌಂಡೇಷನ್ ನೆರಳಾಗಲಿದೆ ಎಂದು ಮುಖ್ಯಮಂತ್ರಿಗಳು ಮೆಚ್ಚುಗೆ ಸೂಚಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





