ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ. ಡಿಸೆಂಬರ್ 4ರಿಂದ 15ರ ತನಕ ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಸಲು ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಈಗಾಗಲೇ ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ಎಂ. ಕೆ. ವಿಶಾಲಾಕ್ಷಿ ಚಳಿಗಾಲದ ಅಧಿವೇಶನದ ಬಗ್ಗೆ ಅಧಿಸೂಚನೆ ಹೊರಡಿಸಿದ್ದಾರೆ. ಡಿಸೆಂಬರ್ 4ರಂದು ಬೆಳಗ್ಗೆ 11 ಗಂಟೆಗೆ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ಆರಂಭವಾಗಲಿದೆ. ಪ್ರತಿಪಕ್ಷ ನಾಯಕರು ಆಯ್ಕೆಯಾದ ಮೇಲೆ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ.
ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅಧಿವೇಶನದ ಸಿದ್ಧತೆಗಳ ಕುರಿತು ಅಧಿಕಾರಿಗಳ ಸಭೆ ನಡೆಸಿದರು. ಈ ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಮಹಾನಗರ ಪಾಲಿಕೆಯ ಆಯುಕ್ತ ಅಶೋಕ ದುಡಗುಂಟಿ, ಅಪರ ಜಿಲ್ಲಾಧಿಕಾರಿ ವಿಜಕುಮಾರ್ ಹೊನಕೇರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೇಣುಗೋಪಾಲ್ ಮುಂತಾದವರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





