ಬೆಂಗಳೂರು: ಬರೋಬ್ಬರಿ ೧೬೨ ಕೋಟಿ ರೂ. ವೆಚ್ಚ ಮಾಡಿ ತಯಾರಿಸಿದ ಜಾತಿ ಗಣತಿಯ ವರದಿಯೇ ಲಭ್ಯವಿಲ್ಲ ಎಂದರೆ ಇದಕ್ಕೆ ಹೊಣೆ ಯಾರು ? ಪೋರ್ಜರಿ ವರದಿ ತಯಾರಿಸಿ ರಾಹುಲ್ ಗಾಂಧಿಯವರನ್ನು ಮೆಚ್ಚಿಸಲು ಹೊರಟಿದ್ದೀರಾ ? ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಪ್ರಶ್ನಿಸಿದ್ದಾರೆ. ಬೆಂಗಳೂರು, ನವೆಂಬರ್ 23: ಬರೋಬ್ಬರಿ ೧೬೨ ಕೋಟಿ ರೂ. ವೆಚ್ಚ ಮಾಡಿ ತಯಾರಿಸಿದ ಜಾತಿ ಗಣತಿಯ ವರದಿಯೇ ಲಭ್ಯವಿಲ್ಲ ಎಂದರೆ ಇದಕ್ಕೆ ಹೊಣೆ ಯಾರು ? ಪೋರ್ಜರಿ ವರದಿ ತಯಾರಿಸಿ ರಾಹುಲ್ ಗಾಂಧಿಯವರನ್ನು ಮೆಚ್ಚಿಸಲು ಹೊರಟಿದ್ದೀರಾ ? ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಪ್ರಶ್ನಿಸಿದ್ದಾರೆ.
ವರದಿಗೆ ಏಕೆ ಸಹಿ ಹಾಕಿಲ್ಲ ಎಂಬ ಬಗ್ಗೆ ಸದಸ್ಯ ಕಾರ್ಯದರ್ಶಿ ಮಗುಮ್ಮಾಗಿದ್ದಾರೆ. ಆಯೋಗದ ವರದಿಗೆ ಅವರು ಅಂದು ಸಹಿ ಹಾಕಿಲ್ಲ ಎಂದರೆ ತಾವು ಈ ವರದಿಯ ಭಾಗವಾಗಲು ತಯಾರಿಲ್ಲ ಎಂದರ್ಥವಲ್ಲವೇ ? ಅಂದರೆ ವರದಿ ತಯಾರಿ ಹಂತದಲ್ಲೇ ಭಾರಿ ಲೋಪ ಹಾಗೂ ಅವ್ಯವಹಾರ ನಡೆದಿದೆ ಎಂಬುದು ಸ್ಪಷ್ಟವಾಗುತ್ತದೆ. ಸಾಮಾಜಿಕ ನ್ಯಾಯದ ಬಗ್ಗೆ ಸಿದ್ದರಾಮಯ್ಯನವರಿಗೆ ನಿಜಕ್ಕೂ ಬದ್ಧತೆ ಇದ್ದರೆ ವರದಿ ಅಧ್ಯಯನದ ಬಗ್ಗೆ ಸಂಪುಟ ಉಪಸಮಿತಿ ರಚಿಸುವ ಇನ್ನೊಂದು ನಾಟಕ ಕೈ ಬಿಟ್ಟು ಹಿಂದಿನ ತಪ್ಪುಗಳ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಲಿ.
bigtvnews | Hubli Dharwad News | Kannada News | Karnataka News Hubli News | News In Hubli | Local news





