Breaking News

ಇವರೆಗೆ ಶತಕೋಟಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ್ದಾರೆ…

ಬೆಂಗಳೂರ: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಮೊಟ್ಟ ಮೊದಲನೆಯದಾಗಿ ಜಾರಿಗೊಳಿಸಿದ ಶಕ್ತಿ ಯೋಜನೆ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಐದು ತಿಂಗಳು ಪೂರೈಸಿದೆ. ಜೂನ್ 11 ರಿಂದ ನವೆಂಬರ್ 22 ವರೆಗೆ ಶತಕೋಟಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ನಾಲ್ಕು ನಿಗಮಗಳ ಬಸ್​ಗಳಲ್ಲಿ ಇಲ್ಲಿವರೆಗೆ ನೂರು ಕೋಟಿ ಮಹಿಳೆಯರು ಶಕ್ತಿ ಯೋಜನೆಯ ಲಾಭ ಪಡೆದಿದ್ದಾರೆ ಎಂಬ ಮಾಹಿತಿಯಿದ್ದು, ಶಕ್ತಿ ಯೋಜನೆ ಜಾರಿಯಾಗಿ ಐದೇ ತಿಂಗಳಿಗೆ 2,397 ಕೋಟಿ ರೂಪಾಯಿ ವ್ಯಯವಾಗಿದೆ. ಇನ್ನು ಕೆಲವೇ ದಿನಗಳಲ್ಲಿ 2,500 ಕೋಟಿ ರೂಪಾಯಿ ತಲುಪಲಿದೆ.

ನುಡಿದಂತೆ ನಡೆಯುವ ನಿಟ್ಟಿನಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಮೊದಲ ಗ್ಯಾರಂಟಿ ಯೋಜನೆಯಾಗಿ ಜೂನ್‌ 11ರಂದು ಶಕ್ತಿ ಯೋಜನೆ ಜಾರಿಗೆ ತಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಮುಂಭಾಗದಲ್ಲಿ ಈ ಯೋಜನೆಗೆ ಚಾಲನೆ ನೀಡಿದ್ದರು.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *