ಹಾಸನ: ಹಾಸನದಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವಂತಹ ಘಟನೆ ಹಾಸನ-ಬೇಲೂರು ರಸ್ತೆಯ ಸೂಲದೇವರಹಳ್ಳಿ ಬಳಿ ನಡೆದಿದೆ. ಬುಧವಾರ ಸಂಜೆ ಹಾಸನ-ಬೇಲೂರು ರಸ್ತೆಯ ಸೂಲದೇವರಹಳ್ಳಿ ಬಳಿ ಬೈಕ್‌ಗೆ ಕಾರು ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗೊಂಡಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಿವ್ಯ (18) ಹಾಗೂ ಪ್ರಜ್ವಲ್ (24) ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇತ್ತ ಬಾಕಿ ಬಿಲ್ ಪಾವತಿ ನೆಪ ಹೇಳಿ ಮೃತದೇಹ ಕೊಡುತ್ತಿಲ್ಲ ಎಂದು ಸಂಬಂಧಿಕರು ಆರೋಪ ಮಾಡಿದ್ದು, ಖಾಸಗಿ ಆಸ್ಪತ್ರೆ ಎದುರು ಮೃತ ಯುವತಿಯ ಕುಟುಂಬಸ್ಥರಿಂದ ಪ್ರತಿಭಟನೆ ಮಾಡಲಾಗಿದೆ.
ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ದಿವ್ಯ ಸಾವನ್ನಪ್ಪಿದ್ದಾಳೆ. ತೀವ್ರವಾಗಿ ಗಾಯಗೊಂಡಿರುವ ಪ್ರಜ್ವಲ್ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪೋಷಕರಿಗೆ ದಿವ್ಯ ಶವ ನೀಡದೆ ಬಾಕಿ ಬಿಲ್ ನೀಡುವಂತೆ ಹೇಳಿದ ಆಸ್ಪತ್ರೆ ಸಿಬ್ಬಂದಿ ಕ್ರಮಕ್ಕೆ ಸಂಬಂಧಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಪೋಷಕರಿಗೆ ದಿವ್ಯ ಶವ ನೀಡದೆ ಬಾಕಿ ಬಿಲ್ ನೀಡುವಂತೆ ಹೇಳಿದ ಆಸ್ಪತ್ರೆ ಸಿಬ್ಬಂದಿ ಕ್ರಮಕ್ಕೆ ಸಂಬಂಧಿಕರ ಆಕ್ರೋಶ ವ್ಯಕ್ತಪಡಿಸಿ ಆಸ್ಪತ್ರೆ ಸಿಬ್ಬಂದಿಗಳ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





