Breaking News

ಭಾರತದ ಮಾಜಿ ಬ್ಯಾಟರ್ ಮತ್ತು ದ್ರಾವಿಡ್ ಅವರ ಮಾಜಿ ಸಹ ಆಟಗಾರ ಲಕ್ಷ್ಮಣ್ ಮುಖ್ಯ ಕೋಚ್ ಪಾತ್ರವನ್ನು ವಹಿಸುವ ಸಾಧ್ಯತೆಯಿದೆ….

ಏಕದಿನ ವಿಶ್ವಕಪ್ ಪಂದ್ಯಾವಳಿ ಬಳಿಕ ರಾಹುಲ್ ದ್ರಾವಿಡ್ ಅವರು ಭಾರತ ತಂಡದ ಮುಖ್ಯ ಕೋಚ್‌ ಆಗಿ ಮುಂದುವರೆಯುವುದಿಲ್ಲ ಎಂದು ಹೇಳಲಾಗಿದೆ. ಅವರು ಕೋಚ್ ಸ್ಥಾನದಿಂದ ಕೆಳಗಿಳಿಯಲಿದ್ದು, ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಮುಂದಿನ ಕೋಚ್ ಆಗುವ ಸಾಧ್ಯತೆ ಇದೆ. ಕಳೆದ ವಾರ ಏಕದಿನ ವಿಶ್ವಕಪ್ ಮುಕ್ತಾಯವಾದ ನಂತರ ಒಪ್ಪಂದವನ್ನು ಮುಕ್ತಾಯಗೊಳಿಸಿರುವ ದ್ರಾವಿಡ್, ಭಾರತ ತಂಡದ ಮುಖ್ಯ ಕೋಚ್ ಆಗಿ ಮುಂದುವರಿಯದಿರಲು ನಿರ್ಧರಿಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. ಭಾರತದ ಮಾಜಿ ಬ್ಯಾಟರ್ ಮತ್ತು ದ್ರಾವಿಡ್ ಅವರ ಮಾಜಿ ಸಹ ಆಟಗಾರ ಲಕ್ಷ್ಮಣ್ ಮುಖ್ಯ ಕೋಚ್ ಪಾತ್ರವನ್ನು ವಹಿಸುವ ಸಾಧ್ಯತೆಯಿದೆ ಎಂದು ಮೂಲಗಳು ಖಚಿತಪಡಿಸಿವೆ.

Share News

About BigTv News

Check Also

IPL 2025 : ಮೊದಲ ಪಂದ್ಯದಲ್ಲಿ ಗೆದ್ದು ಬಿಗಿದ ಆರ್‌ಸಿಬಿ

ಐಪಿಎಲ್ 2025ರ ಭಾಗವಾಗಿ ಆರ್ ಸಿ ಬಿ ವಿರುದ್ಧ ಪಂದ್ಯದಲ್ಲಿ ಕೆಕೆಆರ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡು ನಿಗದಿತ 20 …

Leave a Reply

Your email address will not be published. Required fields are marked *