ಚಾಮರಾಜನಗರ: ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಈಗ ಕೃಷಿಯಲ್ಲಿ ಸೆಕೆಂಡ್ ಇನ್ನಿಂಗ್ ಆರಂಭಿಸಿದ್ದಾರೆ. ಇದರ ಜೊತೆಗೆ, ಬೀದಿನಾಯಿಗಳ ಮೇಲೆ ವಿಶೇಷ ಅಕ್ಕರೆ ಇಟ್ಟುಕೊಂಡಿದ್ದು, ಆಹಾರ ಜೊತೆಗೆ ಔಷಧವನ್ನು ಕೊಡುವ ಮೂಲಕ ಪ್ರಾಣಿ ಪ್ರೀತಿ ಮೆರೆದಿದ್ದಾರೆ.ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಕೃಷಿ ನಡೆಸುವ ರೋಜರ್ ಬಿನ್ನಿ ತಾವು ಬಂದಾಗಲೆಲ್ಲ ಬೀದಿ ನಾಯಿಗಳಿಗೆ ಆಹಾರ ನೀಡುತ್ತಾರೆ. ಕೆಲ ದಿನಗಳ ಹಿಂದೆಯಷ್ಟೇ, ಬೀದಿನಾಯಿಗಳಿಗೆ ಚುಚ್ಚುಮದ್ದನ್ನು ಕೂಡ ಹಾಕಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ತಾವು ಕೃಷಿ ಭೂಮಿಗೆ ತೆರಳುವ ಮಾರ್ಗ ಮಧ್ಯದಲ್ಲಿ ಸಿಗುವ ಬೀದಿ ನಾಯಿಗಳಿಗೆ ಆಹಾರ ನೀಡುತ್ತಾ ಸಾಗುವ ಬಿನ್ನಿಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಇದೀಗ ಭಾರೀ ವೈರಲ್ ಆಗುತ್ತಿದೆ. ಕೆಲ ದಿನಗಳ ಹಿಂದೆಯಷ್ಟೇ ಕೃಷಿ ಉಪಯೋಗಕ್ಕಾಗಿ ಚಾಮರಾಜನಗರದಲ್ಲಿ ಟ್ರಾಕ್ಟರ್ ಖರೀದಿಸಿ ಗಮನ ಸೆಳೆದಿದ್ದರು. ಇದೀಗ ಮತ್ತೆ ಮೂಲಕ ಪ್ರಾಣಿಗಳನ್ನು ಸಂತೈಸುವ ಮೂಲಕ ಗಮನ ಸೆಳೆದಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news





